More

    ಸರ್ಕಾರದ ಗ್ಯಾರೆಂಟಿಯಿಂದ ಜನರಿಗೆ ನೆಮ್ಮದಿ

    ಮೂಡಿಗೆರೆ: ಸರ್ಕಾರದ ಗ್ಯಾರಂಟಿ ಯೋಜನೆಗಳು ನೇರವಾಗಿ ಫಲಾನುಭವಿಗಳ ಮನೆಗೆ ತಲುಪುತ್ತಿರುವುದರಿಂದ ಜನರಲ್ಲಿ ನೆಮ್ಮದಿ ಕಾಣುತ್ತಿದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು. ತಾಪಂ ಸಭಾಂಗಣದಲ್ಲಿ ಬುಧವಾರ ಕಾರ್ಮಿಕ ಇಲಾಖೆಯಿಂದ ಕಾಲೇಜು ವ್ಯಾಸಂಗ ಮಾಡುತ್ತಿರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಚುನಾವಣೆಗೂ ಮುನ್ನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಿಲ್ಲ ಎಂಬ ಆರೋಪವಿತ್ತು. ಚುನಾವಣೆಗಿಂತ ಮುಂಚಿತವಾಗಿ ನೀಡಿದ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಈಡೇರಿಸಿದ್ದರಿಂದ ಜನರಿಗೆ ಈ ಸರ್ಕಾರದ ಮೇಲೆ ನಂಬಿಕೆ ಹೆಚ್ಚಾಗಿದೆ ಎಂದರು. ಗ್ಯಾರಂಟಿ ಯೋಜನೆಗಳಿಗೆ ಸರ್ಕಾರದ ಬೊಕ್ಕಸದಿಂದ ಹಣ ಖರ್ಚಾದರೂ ಅಭಿವೃದ್ಧಿ ಕಾರ್ಯದಲ್ಲಿ ಹಿಂದೆ ಬಿದ್ದಿಲ್ಲ. ಯಾವುದಕ್ಕೂ ಕೊರತೆ ಇಲ್ಲದಂತೆ ಸರ್ಕಾರದ ಆಡಳಿತ ನಡೆಯುತ್ತಿದೆ. ಎಂಟು ತಿಂಗಳ ಅವಧಿಯಲ್ಲಿ ಅಭಿವೃದ್ಧಿಯ ಮಹಾಪೂರವೇ ಹರಿದಿದೆ. ವಿದ್ಯಾರ್ಥಿಗಳು ಸರ್ಕಾರ ನೀಡುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಮಟ್ಟದ ವಿದ್ಯಾಭ್ಯಾಸ ಪಡೆದರೆ ಸರ್ಕಾರದ ಆಯಾ ಕಟ್ಟಿನ ಜಾಗದ ಹುದ್ದೆಗಳನ್ನು ಪಡೆಯಬಹುದು. ದೂರದೃಷ್ಠಿಯ ಆಲೋಚನೆ ಮೂಲಕ ಶಿಕ್ಷಣ ಪಡೆದಲ್ಲಿ ಕಾರ್ಮಿಕರ ಮಕ್ಕಳು ಕೂಡ ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts