28.5 C
Bengaluru
Monday, January 20, 2020

ನವಜೋತ್​ ಸಿಂಗ್​ ಸಿಧು, ಯಾವಾಗ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೀರಿ? ಲೂಧಿಯಾನದೆಲ್ಲೆಡೆ ಪೋಸ್ಟರ್​ಗಳ ಪ್ರದರ್ಶನ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಲೂಧಿಯಾನ: ಅಮರಿಂದರ್​ ಸಿಂಗ್​ ಸಚಿವ ಸಂಪುಟದ ಸದಸ್ಯರಾಗಿರುವ ನವಜೋತ್​ ಸಿಂಗ್​ ಸಿಧು ಅವರ ಸಂಕಷ್ಟ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಕೆಲದಿನಗಳ ಹಿಂದಷ್ಟೇ ಸಂಪುಟದಲ್ಲಿ ಹಿಂಬಡ್ತಿ ಪಡೆದುಕೊಂಡಿರುವ ಸಿಧು ಅವರನ್ನು ಜನರು ಈಗ ಯಾವಾಗ ರಾಜಕೀಯದಿಂದ ನಿವೃತ್ತಿಯಾಗುತ್ತೀರಿ ಎಂದು ಪ್ರಶ್ನಿಸಲು ಆರಂಭಿಸಿದ್ದಾರೆ.

ತಮ್ಮ ಚತುರ ಮಾತುಕತೆಗೆ ಪ್ರಖ್ಯಾತರಾಗಿರುವ ಸಿಧು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಸೋತರೆ, ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿದ್ದರು. ಬಿಜೆಪಿಯ ಸ್ಮೃತಿ ಇರಾನಿ ಅವರ ವಿರುದ್ಧ ರಾಹುಲ್​ ಗಾಂಧಿ 55,120 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಇದರಿಂದಾಗಿ ಕೊಟ್ಟ ಮಾತಿನಂತೆ ರಾಜಕೀಯ ನಿವೃತ್ತಿ ಪಡೆದುಕೊಳ್ಳಬೇಕು ಎಂದು ಲೂಧಿಯಾನದ ಜನತೆ ಸಿಧು ಅವರನ್ನು ಆಗ್ರಹಿಸಲಾರಂಭಿಸಿದ್ದಾರೆ.

ಈ ಸಂಬಂಧ ಲೂಧಿಯಾನದ ಆಯಕಟ್ಟಿನ ಸ್ಥಳಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿರುವ ಜನರು, ಯಾವಾಗ ರಾಜಕೀಯ ನಿವೃತ್ತಿ ಹೊಂದುತ್ತೀರಿ ನವಜೋತ್​ ಸಿಂಗ್​ ಸಿಧು ಎಂದು ಪ್ರಶ್ನಿಸಲಾರಂಭಿಸಿದ್ದಾರೆ. ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಸಮಯ ಬಂದಿದೆ. ಆದ್ದರಿಂದ, ನೀವು ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಹೊಂದುತ್ತೀರಿ ಎಂದು ಹೇಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಪಾಕಿಸ್ತಾನದಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನವಜೋತ್​ ಸಿಂಗ್​ ಸಿಧು ಪಾಕ್​ನ ಸೇನಾಪಡೆ ಮುಖ್ಯಸ್ಥರನ್ನು ಅಪ್ಪಿಕೊಂಡು ವಿವಾದಕ್ಕೆ ತುತ್ತಾಗಿದ್ದರು. ನಂತರ ಪಂಜಾಬ್​ ಸಿಎಂ ಅಮರಿಂದರ್​ ಅವರನ್ನು ಕಟುವಾಗಿ ಟೀಕಿಸಿ ಅವರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಂದಿನಿಂದ ರಾಜಕೀಯವಾಗಿ ಅವರು ಒಂದಿಲ್ಲೊಂದು ಸಂಕಷ್ಟ ಎದುರಿಸುತ್ತಲೇ ಇದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...