More

  ಜನಪರ ಕಾಳಜಿಯುಳ್ಳ ಅಧಿಕಾರಿ ಕೆ.ಶಿವರಾಮ್: ಎನ್.ಮಂಜುನಾಥ್

  ಭದ್ರಾವತಿ: ಛಲವಾದಿ ಸಮುದಾಯಕ್ಕೆ ಮನ್ನಣೆ ತಂದುಕೊಟ್ಟು ತಮ್ಮ ಅಧಿಕಾರಾವಧಿಯಲ್ಲಿ ಸಮಾಜದ ಎಲ್ಲ ಬಡವರಿಗೆ ಸರ್ಕಾರದಿಂದ ಮನೆ ನಿರ್ಮಿಸಿ ತಾನೊಬ್ಬ ಜನಪರ ಕಾಳಜಿಯ ಅಧಿಕಾರಿ ಎಂಬುದನ್ನು ಸಾಬೀತು ಪಡಿಸಿದವರು ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ಎಂದು ದಲಿತ ನೌಕರರ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ತಿಳಿಸಿದರು.
  ಭಾನುವಾರ ನಗರದ ದಲಿತ ನೌಕರರ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಛಲವಾದಿ ಸಮಾಜ ಮತ್ತು ಮಾದಿಗ ಸಮಾಜದಿಂದ ಶುಗರ್ ಟೌನ್ ಲಯನ್ಸ್ ಕಣ್ಣಿನ ಆಸ್ಪತ್ರೆ ಆಯೋಜಿಸಿದ್ದ ನಟ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
  ಸೋಲನ್ನು ಸವಾಲಾಗಿ ಸ್ವೀಕರಿಸಿದ ಶಿವರಾಮ್ ಅವರು ಯುವ ಸಮುದಾಯಕ್ಕೆ ಜೀವನ ಎಂದರೇನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ತಳ ಸಮುದಾಯದಲ್ಲಿ ಜನಿಸಿ, ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನ ಪಡೆದರು. ಬಡವರ ಕಷ್ಟಗಳನ್ನು ಅರಿತು ಅವರ ಅಧಿಕಾರಾವಧಿಯಲ್ಲಿ ಸಾಕಷ್ಟು ಜನಮನ್ನಣೆ ಪಡೆದ ಕಾರ್ಯಕ್ರಮಗಳನ್ನು ಜಾರಿಗೆ ತಂದರು ಎಂದರು.
  ಹೊಳೆನರಸೀಪುರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ವಿಜ್ಞಾನ ವಿಭಾಗದ ಪ್ರಾಚಾರ್ಯ ಪ್ರೊ. ಎನ್.ಆರ್.ಶಿವರಾಮ್, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲಿ ಡಿಸಿಯಾಗಿ ಸೇವೆ ಸಲ್ಲಿಸಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಎಂಐಎಸ್‌ಎಲ್‌ನಲ್ಲಿ ನಿರ್ದೇಶಕರಾಗಿ, ಪಶು ಸಂಗೋಪನಾ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಮಾಡಿದ ಕೆಲಸಗಳನ್ನು ಸ್ಮರಿಸಿದರು. ದಾವಣಗೆರೆಯಲ್ಲಿ ಎಲ್ಲ ಜಾತಿಯ ಬಡವರಿಗೆ 11 ಸಾವಿರ ಮನೆಗಳನ್ನು ನಿರ್ಮಿಸಿಕೊಟ್ಟಿದ್ದು ರಾಜ್ಯದ ಇತಿಹಾಸದಲ್ಲಿ ದಾಖಲೆ ಎಂದು ಹೇಳಿದರು.

  ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಶಿವಬಸಪ್ಪ, ನಗರಸಭಾ ಸದಸ್ಯ ಬಿ.ಕೆ.ಮೋಹನ್, ಛಲವಾದಿ ಸಮಾಜದ ಅಧ್ಯಕ್ಷ ಚನ್ನಪ್ಪ, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್.ಮಂಜುನಾಥ್, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ, ಮಾದಿಗ ಮಹಾಸಭಾ ಅಧ್ಯಕ್ಷ ಎಂ.ಶಿವಕುಮಾರ್, ಹೊಸ ನಂಜಾಪುರ ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ಕಾರ್ಯದರ್ಶಿ ಆರ್.ಶ್ರೀನಿವಾಸ್, ಭೋವಿ ಸಮಾಜದ ಮುಖಂಡ ಆರ್.ತಮ್ಮಯ್ಯ, ಬಂಜಾರ ಸಮಾಜದ ಅಧ್ಯಕ್ಷ ಪ್ರೇಮಕುಮಾರ್, ದಲಿತ ನೌಕರರ ಒಕ್ಕೂಟದ ಅಧ್ಯಕ್ಷ ಎ.ಕೆ.ಲಿಂಗರಾಜು, ಡಿಎಸ್‌ಎಸ್ ಸಂಚಾಲಕ ನಾಗರಾಜ, ಟಿ.ಎಂ.ಮಂಜುನಾಥ್, ಜಯಮ್ಮ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts