More

    63ಜನರಿಗೆ ಕರೊನಾ ಸೋಂಕು

    ಮಂಡ್ಯ: ಜಿಲ್ಲೆಯಲ್ಲಿ ಭಾನುವಾರ 63 ಜನರಲ್ಲಿ ಕರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2558ಕ್ಕೇರಿಕೆಯಾಗಿದೆ. ಅಂತೆಯೇ 34 ಸೋಂಕಿತರು ಚೇತರಿಸಿಕೊಂಡಿದ್ದಾರೆ.

    ಮಂಡ್ಯ ತಾಲೂಕಿನಲ್ಲಿ 34, ಮದ್ದೂರಿನಲ್ಲಿ ಮೂವರು, ಮಳವಳ್ಳಿಯಲ್ಲಿ 9, ಶ್ರೀರಂಗಪಟ್ಟಣದಲ್ಲಿ ಮೂವರು, ಪಾಂಡವಪುರದಲ್ಲಿ ಒಬ್ಬರು ಹಾಗೂ ನಾಗಮಂಗಲ ತಾಲೂಕಿನಲ್ಲಿ 13 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

    ಅಂತೆಯೇ, ಚಿಕಿತ್ಸೆ ಬಳಿಕ ಪಾಂಡವಪುರದ 11 ಜನರು, ನಾಗಮಂಗಲದ 10, ಶ್ರೀರಂಗಪಟ್ಟಣದ ಆರು ಜನರು, ಮಂಡ್ಯದ ಐವರು ಮತ್ತು ಕೆ.ಆರ್.ಪೇಟೆ ತಾಲೂಕಿನ ಇಬ್ಬರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 1351ಕ್ಕೆ ಏರಿಕೆಯಾಗಿದೆ.

    ಜಿಲ್ಲೆಯಲ್ಲಿ 1184 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 263 ಜನರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ, 58 ಜನರು ಜಿಲ್ಲಾ ಕೋವಿಡ್ ಕೇರ್ ಸೆಂಟರ್‌ನಲ್ಲಿ, ಏಳು ಜನರು ಮೈಸೂರು ಕೋವಿಡ್ ಆಸ್ಪತ್ರೆಯಲ್ಲಿ, 264 ಜನರು ತಾಲೂಕು ಕೋವಿಡ್ ಆಸ್ಪತ್ರೆಯಲ್ಲಿ, 338 ಜನರು ತಾಲೂಕು ಕೋವಿಡ್ ಕೇರ್ ಸೆಂಟರ್‌ನಲ್ಲಿ, 59 ಜನರು ಖಾಸಗಿ ಆಸ್ಪತ್ರೆಯಲ್ಲಿ ಮತ್ತು 195 ಜನರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts