More

    ಸಿನಿಮಾಗಳಿಂದ ಜನರು ಪಾಶ್ಚಿಮಾತ್ಯ ಸಂಸ್ಕೃತಿಗೆ ಹೆಚ್ಚು ಪ್ರಭಾವಿತರಾಗುತ್ತಿದ್ದಾರೆ: ಅಲಹಾಬಾದ್​ ಹೈಕೋರ್ಟ್​

    ಅಲಹಾಬಾದ್: ಇತ್ತೀಚಿನ ದಿನಗಳಲ್ಲಿ ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಹೆಚ್ಚು ಪ್ರಭಾವಿತರಾಗುತ್ತಿದ್ದು, ಅವರ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಅಲಹಾಬಾದ್​ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ.

    ಅಪ್ರಾಪ್ತ ವಯಸ್ಕಳ ಸಾವಿಗೆ ಸಂಬಂಧಿಸಿದಂತೆ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ್​ ಅವರಿದ್ದ ಏಕಸದಸ್ಯ ಪೀಠದ ಮುಂದೆ ಭಾರತ ದಂಡ ಸಂಹಿತೆ(IPC Section) 306ರ ಬಗ್ಗೆ ಗಮನ ಸೆಳೆಯಲಾಯಿತು. ಇತ್ತೀಚಿನ ದಿನಗಳಲ್ಲಿ ಮುಕ್ತ ಸಂಬಂಧಗಳು ಹೆಚ್ಚುತ್ತಿದ್ದು, ಪಾಶ್ಚಿಮಾತ್ಯ ಜೀವನಶೈಲಿ ಅಳವಡಿಕೆಯೇ ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

    ಪಾಶ್ಚಿಮಾತ್ಯ ಜೀವನಶೈಲಿಯ ಸಂಭಾವ್ಯ ಪರಿಣಾಮಗಳನ್ನು ಅರ್ಥಮಾಡಿಕೊಳ್ಳದೆ ಮುಕ್ತ ಸಂಬಂಧಗಳನ್ನು ಉತ್ತೇಜಿಸುವುದರಿಂದ ಮಾನಸಿಕ ಖಿನ್ನತೆ ಹಾಗೂ ಆತ್ಮಹತ್ಯೆಗೆ ಕಾರಣವಾಗುತ್ತಿದೆ.ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ ತಮ್ಮಗೆ ಸರಿಯಾದ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳದೆ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ನ್ಯಾಯಮೂರ್ತಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: VIDEO| ರಶೀದಿ ಕೊಡದೆ ದಂಡ ಸ್ವೀಕರಿಸಿದ ಟ್ರಾಫಿಕ್​​ ಪೊಲೀಸ್​; ಕರ್ತವ್ಯದಿಂದ ಅಮಾನತು

    ಯುವಜನತೆ ಸಿನಿಮಾ, ಸಾಮಾಜಿಕ ಜಾಲತಣ, ವೆಬ್​ ಸೀರೀಸ್​ನಿಂದ ಪ್ರಭಾವಿತರಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾಗಳಲ್ಲಿ ಹಾಗೂ ವೆಬ್​ ಸೀರೀಸ್​ಗಳಲ್ಲಿ ಒಬ್ಬ ವ್ಯಕ್ತಿಯೂ ಒಂದಕ್ಕಿಂತ ಹೆಚ್ಚು ಸಂಬಂಧಗಳನ್ನು ಹೊಂದಬಹುದು ಎಂದು ತೋರಿಸುತ್ತವೆ. ಇದರಿಂದ ಆಕರ್ಷಿತರಾಗಿ ಸಮಾಜದ ಮಾನದಂಡಗಳ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ.

    ಈ ನಿಟ್ಟಿನಲ್ಲಿ ಯುವಸಮಾಜವನ್ನು ಸರಿಐಆದ ಧಾರಿಯಲ್ಲಿ ಕೊಂಡೊಯ್ಯುವ ಅವಶ್ಯಕತೆಯಿದ್ದು, ಎಲ್ಲರೂ ಕೆಲಸ ಮಾಡಬೇಕಾಗಿದೆ ಎಂದು ಅಲಹಾಬಾದ್​ ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ್ ಅಭಿಪ್ರಾಯಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts