More

    ಟೋಯಿಂಗ್​ಗೆ ಬಂದಿದ್ದವರನ್ನು ತರಾಟೆಗೆ ತಗೊಂಡ ಜನರು; ಟೋ ಮಾಡದೆ ವಾಪಸ್ ಹೋದ ಪೊಲೀಸರು

    ತುಮಕೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಭಾರಿ ಚರ್ಚೆಯಲ್ಲಿರುವ ಟೋಯಿಂಗ್ ವಿಚಾರ, ಇದೀಗ ತುಮಕೂರಿನಲ್ಲಿ ಕೂಡ ಮುನ್ನೆಲೆಗೆ ಬಂದಿದೆ. ಮಾತ್ರವಲ್ಲ, ಟೋಯಿಂಗ್​ಗೆ ಬಂದಿದ್ದ ಪೊಲೀಸರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ಉಂಟಾಗಿತ್ತು.

    ತುಮಕೂರು ಉಪನೋಂದಣಾಧಿಕಾರಿ ಕಚೇರಿ ಬಳಿ ನಿಲ್ಲಿಸಿದ್ದ ವಾಹನಗಳ ಟೋಯಿಂಗ್​ಗೆ ಸಂಚಾರ ಪೊಲೀಸರು ಬಂದಿದ್ದಾಗ ಈ ಸನ್ನಿವೇಶ ಉಂಟಾಗಿದೆ. ನೋ ಪಾರ್ಕಿಂಗ್​ ಎಂದು ಸೂಚಿಸಿದ್ದ ಸ್ಥಳ ಬಿಟ್ಟು ಬೇರೆ ಕಡೆ ನಿಲ್ಲಿಸಿದ್ದ ವಾಹನಗಳನ್ನೂ ಟೋಯಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಪಿ ಸಾರ್ವಜನಿಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇಂದು ಮಧ್ಯಾಹ್ನ ನಡೆದ ಈ ಮಾತಿನ ಚಕಮಕಿ ವೇಳೆ ಸಾರ್ವಜನಿಕರ ಖಡಕ್ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಪೊಲೀಸರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಮರಳುವಂತಾಗಿತ್ತು.

    ಟೋಯಿಂಗ್​ಗೆ ಬಂದಿದ್ದವರನ್ನು ತರಾಟೆಗೆ ತಗೊಂಡ ಜನರು; ಟೋ ಮಾಡದೆ ವಾಪಸ್ ಹೋದ ಪೊಲೀಸರು
    ಸಂಚಾರ ಪೊಲೀಸರನ್ನು ಸುತ್ತುವರಿದು ಪ್ರಶ್ನಿಸುತ್ತಿರುವ ಸಾರ್ವಜನಿಕರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts