More

    ಬೆಳಗಾವಿಯಲ್ಲಿ ಕಾಂಗ್ರೆಸ್​​ಗೆ​ ಜನ ಉತ್ತರ ಕೊಟ್ಟಿದ್ದಾರೆ: ಸಿಎಂ ಬೊಮ್ಮಾಯಿ

    ಬೆಂಗಳೂರು: ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲವು ಖುಷಿ ತಂದಿದೆ. ಇದಕ್ಕೆ ಶ್ರಮಿಸಿದ ರಾಜ್ಯಾಧ್ಯಕ್ಷ ಕಟೀಲು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಳಗಾವಿಯಲ್ಲಿ ಎಂಇಎಸ್ ಜೊತೆ ಕಾಂಗ್ರೆಸ್​​ ಕೈಸೇರಿಸಿದೆ ಎನ್ನಲಾಗುತ್ತಿತ್ತು. ಆದ್ರೆ ಜನ ಅದಕ್ಕೆ ಸರಿಯಾದ ಉತ್ತರ ಕೊಟ್ಟಿದ್ದಾರೆ ಎಂದರು. ಕಲ್ಬುರ್ಗಿಯಲ್ಲಿ ಕೂಡ ನಾವು ಹೆಚ್ಚಿನ ಪ್ರಮಾಣದ ಗೆಲುವು ಕಂಡಿದ್ದೇವೆ. ಇದೆಲ್ಲಾ ಮುಂದಿನ ದಿನಗಳಲ್ಲಿ ಬಿಜೆಪಿಗೆ ಬೆಂಬಲ ಸಿಗುವ‌ ಲಕ್ಷಣ ತೋರಿಸ್ತಾ ಇದೆ. ನಮ್ಮ ಮೇಲೆ ಬಿಎಸ್​​​ವೈ ಹಾಗೂ ಎಲ್ಲಾ ರಾಷ್ಟ್ರೀಯ ನಾಯಕರ ಆಶೀರ್ವಾದ ಇದೆ ಎಂದರು.

    ಇದನ್ನೂ ಓದಿ: ಘೋರ ದುರಂತ: ಒಂದೇ ಮನೆಯಲ್ಲಿ ನೇಣಿಗೆ ಶರಣಾದ ಅಜ್ಜಿ, ಮಗಳು, ಮೊಮ್ಮಗಳು…

    ಐತಿಹಾಸಿಕ ಗೆಲುವು: ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಪ್ರತಿಕ್ರಿಯಿಸಿದ್ದು, ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದೆ. ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಇದೊಂದು ಐತಿಹಾಸಿಕ ಗೆಲುವಾಗಿದೆ ಎಂದಿದ್ದಾರೆ.

    ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸಂಸದರು, ಶಾಸಕರ ಹಾಗೂ ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳು, ಸಾಧನೆಗಳು ಚುನಾವಣೆ ಮೇಲೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಈ ಫಲಿತಾಂಶ ನಿದರ್ಶನ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತರ ಉತ್ತಮ ಫಲಿತಾಂಶ ಬಂದಿದೆ ಎಂದಿದ್ದಾರೆ.

    ಇದನ್ನೂ ಓದಿ: ಹು-ಧಾ ಪಾಲಿಕೆ ಚುನಾವಣೆ ಫಲಿತಾಂಶ ಅತಂತ್ರ: ಬಿಜೆಪಿ-ಕಾಂಗ್ರೆಸ್​ ಪಾಲಿಗೆ ಪಕ್ಷೇತರ ಅಭ್ಯರ್ಥಿಗಳೇ‌ ನಿರ್ಣಾಯಕ

    ಒಟ್ಟಾರೆಯಾಗಿ ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿಪರ ಆಡಳಿತ ನೀಡಲಿದೆ. ಈ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ, ಮತದಾರರಿಗೆ ಹಾಗೂ ಮುಖಂಡರಿಗೆ ಅಭಿನಂದನೆಗಳು ಎಂದು ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಕಿಮ್​ ಶರ್ಮ – ಲಿಯಾಂಡರ್​ ಪೇಸ್ ಪ್ರೇಮಸಂಬಂಧ ಜಗಜ್ಜಾಹೀರು!

    ಚಿಕ್ಕಚೊಕ್ಕ ಗಣೇಶೋತ್ಸವ! ಆಯೋಜಕರು ಲಸಿಕೆ ಪಡೆದಿರಬೇಕು, ಜನಜಂಗುಳಿ ಸಲ್ಲ… ಇಲ್ಲಿವೆ, ಮಾರ್ಗಸೂಚಿಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts