ಗಾಯಾಳುವನ್ನು ಆಸ್ಪತ್ರೆಗೆ ಸೇರಿಸದೆ ಮಾನವೀಯತೆ ಮರೆತ ಜನರು

ದಾವಣಗೆರೆ: ಕಾರು ಮತ್ತು ಬೈಕ್​ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡ ಬೈಕ್​ ಸವಾರ ಸುಮಾರು 1 ಗಂಟೆ ರಸ್ತೆಯಲ್ಲೇ ಬಿದ್ದು ನರಳಾಡಿದರೂ ಅವರನ್ನು ಆಸ್ಪತ್ರೆಗೆ ಸೇರಿಸದೆ ಜನರು ಮಾನವೀಯತೆ ಮರೆತಿದ್ದಾರೆ.

ಮೂರು ದಿನಗಳ ಹಿಂದೆ ಅಪಘಾತ ನಡೆದಿದ್ದು, ಗಾಯಾಳು ನರಳಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಂಚಿಕೆರೆ ಗ್ರಾಮದ ಬಳಿ ಮಧ್ಯಾಹ್ನ ನಡೆದಿತ್ತು. ಅಪಘಾತದಲ್ಲಿ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ನಿವಾಸಿ ಸಿದ್ದೇಶ್ (26) ಎಂಬವರು ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆದರೆ ಅವರನ್ನು ಯಾರೊಬ್ಬರೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಲಿಲ್ಲ.

ಸಿದ್ದೇಶ್​ ಅವರನ್ನು ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿ ಎಂದು ತಿಳಿದು ಬಂದಿದೆ.