More

    ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಅವಶ್ಯ

    ಬಳ್ಳಾರಿ: ಸಂವಿಧಾನದ ಮೌಲ್ಯ, ಆಶಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.

    ನಗರದ ಐತಿಹಾಸಿಕ ಬಳ್ಳಾರಿ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಈ ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

    ಸಂವಿಧಾನದ ತತ್ವಾದರ್ಶಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂವಿಧಾನ ಕುರಿತ ಅರಿವು ಹೊಂದಬೇಕು. ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್ ಮಾತನಾಡಿ, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನ ಮೌಲ್ಯ ಮತ್ತು ಆದರ್ಶಗಳನ್ನು ರಾಜ್ಯ, ರಾಷ್ಟ್ರ ಮಟ್ಟಕ್ಕೆ ಪಸರಿಸುವ ಕಾರ್ಯವಾಗಬೇಕಿದೆ. ಅದಕ್ಕೆ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.

    ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಕೆ.ಎಚ್, ಅಬಕಾರಿ ಉಪ ಆಯುಕ್ತ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಮತಾ.ಪಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ, ರೆಡ್‌ಕ್ರಾಸ್ ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts