ಸಿನಿಮಾ

ಜೂನ್ 1ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಕಟ್ಟಬೇಡಿ: ಸಂಸದ ಪ್ರತಾಪ್ ಸಿಂಹ

ಮೈಸೂರು: ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಬಿಲ್ ಕಟ್ಟಬೇಡಿ. ಹೆಚ್ಚುವರಿಯಾಗಿ ಬಳಸಿದ್ದರೆ ಮಾತ್ರ ಬಿಲ್​ ಕಟ್ಟಿ, ಗ್ಯಾರಂಟಿ ಕಾರ್ಡ್​ನಲ್ಲಿ ಕಾಂಗ್ರೆಸ್​ನವರು ಎಲ್ಲಿಯೂ ಷರತ್ತುಗಳು ಅನ್ವಯ ಅಂತ ನಮೂದಿಸಿಲ್ಲ ಎಂದು ಸಂಸದ ಪ್ರತಾಪ್​ ಸಿಂಹ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲ ಮನೆಯ ಯಜಮಾನಿಗೆ 2 ಸಾವಿರ ರೂ. ಕೊಡುವುದರ ಜತೆಗೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು. ಜನರು ನಿಮ್ಮ‌ ಮುಖ ನೋಡಿ ಮತ ಹಾಕಿಲ್ಲ. ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ ಎಂಬುದನ್ನು ಕಾಂಗ್ರೆಸ್​ ನೆನಪಿಟ್ಟುಕೊಳ್ಳಲಿ ಎಂದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಗೆ ಬಿಜೆಪಿಯಿಂದ ಜೀವ ಬೆದರಿಕೆ ಇದೆ; ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

ಕಾಂಗ್ರೆಸ್ಸಿನವರು ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು. ರಾಜಸ್ಥಾನದಲ್ಲಿ ಇವತ್ತಿನವರೆಗೂ ಈ ಹಿಂದೆ ಕೊಟ್ಟ ಭರವಸೆ ಈಡೇರಿಸಿಲ್ಲ. ಒಂದು ವೇಳೆ ಗ್ಯಾರಂಟಿಗಳನ್ನು ಈಡೇರಿಸದಿದ್ದರೆ ಜೂನ್​ 1ರಿಂದ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಕಾಲು ಬೇಕಾದರೂ ಹಿಡಿಯುತ್ತೇನೆ. ಚುನಾವಣೆ ಬಂದಾಗ ರಾಜಕಾರಣ ಮಾಡೋಣ, ಉಳಿದ ಸಮಯದಲ್ಲಿ ಅಭಿವೃದ್ಧಿ ರಾಜಕಾರಣ ಮಾಡೋಣ. ಅಭಿವೃದ್ಧಿ ಪರ ಇರುವವರನ್ನು ಮೈಸೂರು ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಿಸಬೇಕು. ಈ ವಿಚಾರವಾಗಿ ತಾವು ಸಿಎಂ ಮನೆಗೆ ಹೋಗುವುದಾಗಿ ತಿಳಿಸಿದರು.

ಜತೆಗೆ, ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಪರಿಣಾಮ ಲೋಕಸಭಾ ಚುನಾವಣೆ ಮೇಲೆ ಬೀರಲ್ಲ. ದೇಶಕ್ಕೆ ಎಂಥಹ ನಾಯಕ ಬೇಕು ಅಂತಾ ಕನ್ನಡಿಗರಿಗೆ ಗೊತ್ತಿದೆ ಎಂದು ಹೇಳಿದರು.(ಏಜೆನ್ಸೀಸ್​)

Latest Posts

ಲೈಫ್‌ಸ್ಟೈಲ್