ಬಳ್ಳಾರಿ: ಬಿಜೆಪಿ ಸರ್ಕಾರ ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಲೂಟಿ ಮಾಡಿತ್ತು. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಇಡೀ ಬಳ್ಳಾರಿ ಜಿಲ್ಲೆ ಜನ ಭಯದಿಂದ ಜೀವನ ಮಾಡುತ್ತಿದ್ದರು. ಈಗ ಜಿಲ್ಲೆ ಜನ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್( DCM DK ShivaKumar)ಹೇಳಿದರು.
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರ ಇಲ್ಲಿನ ತಿಮಲಾಪುರ, ಎಳುಬೆಂಚಿಯಲ್ಲಿ ಮಂಗಳವಾರ ಪ್ರಚಾರ ನಡೆಸಿದರು ಮಾತನಾಡಿದರು.
ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಆಡಳಿತ ಹೇಗಿತ್ತು ಎಂದು ನೀವು ನೋಡಿದ್ದೀರಿ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಹೊಡೆದರು. ಕೋವಿಡ್ ಸಮಯದಲ್ಲಿ ಯಾವುದೇ ಸಮುದಾಯಕ್ಕೆ ಬಿಜೆಪಿ ಸರ್ಕಾರ ನೆರವು ನೀಡಲಿಲ್ಲ. ನಿರ್ಮಲಾ ಸೀತರಾಮನ್ ಅವರು 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದರು. ಅದರಲ್ಲಿ ನಿಮಗೆ ಯಾವುದಾದರೂ ಬಂತಾ? ಬಡವರಿಗೆ ಸಹಾಯ ಮಾಡದಿದ್ದರೆ ಅಂತಹ ಸರ್ಕಾರ ಯಾಕೆ ಬೇಕು. ಕೋವಿಡ್ ಅಕ್ರಮದ ವರದಿ ಬಂದಿದೆ. ಅದನ್ನು ನೋಡಿ ನನಗೆ ಕೋವಿಡ್ ಬಂದಷ್ಟು ಭಯವಾಗಿದೆ ಎಂದರು.
ಇದನ್ನೂ ಓದಿ; ನಮ್ಮ ಕುಟುಂಬಕ್ಕೂ ಈ ಪಾತ್ರಕ್ಕೂ ಸಾಮ್ಯತೆ ಇದೆ; Amaran ಸಕ್ಸಸ್ ಮೀಟ್ನಲ್ಲಿ ಕಣ್ಣೀರಿಟ್ಟ ನಟ ಶಿವಕಾರ್ತಿಕೇಯನ್
ಸಂಡೂರು ನೆಮ್ಮದಿಯಿಂದ ಬದುಕುವ ಕ್ಷೇತ್ರ
ಈ ಹಿಂದೆ ಬಳ್ಳಾರಿ ಜನ ಭಯದಿಂದ ಬದುಕು ನಡೆಸುವ ಪರಿಸ್ಥಿತಿ ಇತ್ತು. ಸಿದ್ದರಾಮಯ್ಯ ಬಂದರೆ ಅಧಿಕಾರಿಗಳ ಭೇಟಿಗೂ ಅವಕಾಶ ನೀಡುತ್ತಿರಲಿಲ್ಲ. ಆಗ ನಾನು, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ನಾಯಕರು ಪಾದಯಾತ್ರೆ ಮಾಡಿದೆವು. ನಾನು ಕೂಡ ಈ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದೆ. ನಿಮ್ಮ ಊರನ್ನು ನ್ಯೂಯಾರ್ಕ್ ಬೀಜಿಂಗ್ ಮಾಡುತ್ತೇವೆ ಎಂದು ನಾನು ಹೇಳುವುದಿಲ್ಲ. ನೀವು ನೆಮ್ಮದಿಯ ಬದುಕು ಸಾಗಿಸಬೇಕು. ಅದು ನಮ್ಮ ಗುರಿ. ಬಳ್ಳಾರಿ ಜಿಲ್ಲೆಯಲ್ಲಿ ಸಂಡೂರನ್ನು ನೆಮ್ಮದಿಯಾಗಿ ಬದುಕು ನಡೆಸುವ ಕ್ಷೇತ್ರವನ್ನಾಗಿ ಮಾಡಿದ್ದೇವೆ ಎಂದು ನುಡಿದರು.
ಇದನ್ನೂ ಓದಿ; ಚನ್ನಪಟ್ಟಣದಲ್ಲಿ 12ರಿಂದ ನಿಷೇಧಾಜ್ಞೆ – ನ.11ರಿಂದ ಎಣ್ಣೆ ಸಿಗಲ್ಲ
ನನ್ನ ಕ್ಷೇತ್ರಕ್ಕಿಂತ ಸಂಡೂರಿನಲ್ಲಿ ತುಕಾರಾಂ ಹೆಚ್ಚಿನ ಕೆಲಸ
“ನಾನು ಕನಕಪುರ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿಗಿಂತ ಹೆಚ್ಚು ಕೆಲಸವನ್ನು ತುಕಾರಾಂ ಅವರು ಸಂಡೂರು ಕ್ಷೇತ್ರದಲ್ಲಿ ಮಾಡಿ, ಇಲ್ಲಿನ ಜನರ ಮನ ಗೆದ್ದಿದ್ದಾರೆ” ಎಂದು ಬಣ್ಣಿಸಿದ ಡಿಸಿಎಂ, ಚುನಾವಣೆ ಪ್ರಕಟವಾಗುವ ಮುನ್ನ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಡೂರಿಗೆ ಬಂದು ಅನೇಕ ಅಭಿವೃದ್ಧಿ ಕೆಲಸಗಳ ಬಗ್ಗೆ ಘೋಷಣೆ ಮಾಡಿದ್ದೆವು. ಇಲ್ಲಿನ ಅಭಿವೃದ್ಧಿ ಕೆಲಸ ನೋಡಿದಾಗ ನಾನು ಕನಕಪುರದಲ್ಲಿ ಮಾಡಿರುವ ಕೆಲಸಕ್ಕಿಂತ ಹೆಚ್ಚು ಕೆಲಸ ಇಲ್ಲಿ ಆಗಿದೆ. 200 ಹಾಸಿಗೆಗಳ ಆಸ್ಪತ್ರೆ, ₹35 ಕೋಟಿ ಮೊತ್ತದ ತಾಲೂಕು ಕಚೇರಿ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಸಣ್ಣ ಪುಟ್ಟ ಹಳ್ಳಿಯಲ್ಲೂ ಕಾಂಕ್ರೀಟ್ ರಸ್ತೆ ಹಾಕಿಸಿದ್ದಾರೆ ಎಂದರು.
ನಾನು ಕೆಲವು ತಪ್ಪುಗಳನ್ನು ಮಾಡಿದ್ದೇನೆ; ಸೌತ್ ಬ್ಯೂಟಿ ಸಮಂತಾ ಹೀಗೆಳಿದ್ದೇಕೆ | Samantha Ruth Prabhu