ಕಣ್ಣೀರಿಗೆ ಯಶವಂತಪುರ ಜನತೆ ಮರುಳಾಗಲ್ಲ: ಬಿಜೆಪಿ ಅಭ್ಯರ್ಥಿ ಸೋಮಶೇಖರ್ ಹೇಳಿಕೆ

ಬೆಂಗಳೂರು: ಯಶವಂತಪುರದ ಜನತೆ ತುಂಬಾ ಬುದ್ಧಿವಂತರಿದ್ದು, ಕಣ್ಣೀರು ಹಾಕಿದಾಕ್ಷಣ ಮರುಳಾಗುವುದಿಲ್ಲ. ವಿರೋಧ ಪಕ್ಷದವರು ತಂತ್ರಗಾರಿಕೆ ಫಲ ಕೊಡುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿ ಮಾತನಾಡಿದರು. ಕ್ಷೇತ್ರದಲ್ಲಿ ಮೂಲ ಸೌಕರ್ಯ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ದೊಡ್ಡಬಿದರಕಲ್ಲು, ಹೇರೋಹಳ್ಳಿ ವಾರ್ಡ್​ಗಳಲ್ಲಿ ಕಳೆದೊಂದು ದಶಕದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಾಗಿವೆ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇನೆ ಎಂದು ಹೇಳಿದರು. ಅಧಿಕಾರ ಇರಲಿ, ಇಲ್ಲದಿರಲಿ ಸದಾ ಜನಸೇವೆಯಲ್ಲಿ ತೊಡಗಿಕೊಂಡಿದ್ದೇನೆ. … Continue reading ಕಣ್ಣೀರಿಗೆ ಯಶವಂತಪುರ ಜನತೆ ಮರುಳಾಗಲ್ಲ: ಬಿಜೆಪಿ ಅಭ್ಯರ್ಥಿ ಸೋಮಶೇಖರ್ ಹೇಳಿಕೆ