ಜನರು ಕಚೇರಿಗಳಿಗೆ ಅಲೆದಾಡದಂತೆ ನೋಡಿಕೊಳ್ಳಿ

29mnv02
ಮಾನ್ವಿ ತಾಲೂಕಿನ ಚೀಕಲಪರ್ವಿಯಲ್ಲಿ ತಾಲೂಕು ಮಟ್ಟದ ಜನಸಂದನಾ ಕಾರ್ಯಕ್ರಮದಲ್ಲಿ ಶಾಸಕ ಹಂಪಯ್ಯನಾಯಕ ಮಾತನಾಡಿದರು. ಮದ್ಲಾಪುರು ಗ್ರಾಪಂ ಅಧ್ಯಕ್ಷೆ ಹುಸೇನ್‌ಬೀ, ತಹಸೀಲ್ದಾರ್ ರಾಜು ಪಿರಂಗಿ, ಗ್ರೇಡ್-2 ತಹಸೀಲ್ದಾರ್ ಅಬ್ದುಲ್‌ವಾಹೀದ್, ತಾಪಂ ಇಒ ಖಲೀದ್ ಆಹ್ಮದ್, ತಾಲೂಕು ವೈದ್ಯಾಧಿಕಾರಿ ಶರಣಬಸವ ಪಾಟೀಲ್, ಪಿಎಸ್‌ಐ ವೀರನಗೌಡ ಕರಡಿಗುಡ್ಡ ಇತರರಿದ್ದರು.ವ ಪಾಟೀಲ್, ಪಿಎಸ್‌ಐ ವೀರನಗೌಡ ಕರಡಿಗುಡ್ಡ ಇತರರಿದ್ದರು.
Published on

ಮಾನ್ವಿ: ಪ್ರತಿಯೊಬ್ಬರೂ ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಹಂಪಯ್ಯನಾಯಕ ಹೇಳಿದರು.

ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಶನಿವಾರ ತಾಲುಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮಿಣ ಪ್ರದೇಶದ ಜನರ ಸಮಸ್ಯೆಗಳನ್ನು ಸರಿಪಡಿಸಲು ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಬಂದಿದ್ದಾರೆ ಜನರ ಕುಂದು ಕೊರತೆ ಹಾಗೂ ಅಹವಾಲುಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಸಾಧ್ಯವಾದಷ್ಟು ಸ್ಥಳದಲ್ಲೇ ಬಗೆಹರಿಸುವಂತೆ ಅಧಿಕಾರಿಗಳಿ ಸೂಚಿಸಿದರು.

ರಾಜ್ಯ ಸರ್ಕಾರ ಜನಸ್ನೇಹಿ ಆಡಳಿತ ನೀಡಲು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪ್ರತಿ ತಿಂಗಳು ಜನಸ್ಪಂದನ ಸಭೆ ಮಾಡಿ ಜನರ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಯಾವುದೇ ಕಾರಣಕ್ಕೂ ಹಿಂದಿಟು ಹಾಕಬಾರದು.

ಸ್ಥಳದಲ್ಲಿ ಬಗೆಹರಿಯದ ಸಮಸ್ಯೆಗಳನ್ನು ವಾರದ ಒಳಗಾಗಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಜನರು ಕಚೇರಿಗಳಿಗೆ ಅಲೆದಾಡದಂತೆ ನೋಡಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net