More

    ಜನರ ನೈಜ ಸಮಸ್ಯೆ ಪರಿಹಾರಕ್ಕೆ ಒತ್ತಾಯ

    ಹರಪನಹಳ್ಳಿ: ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಜನಸಾಮಾನ್ಯರ ನೈಜ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ ಪಕ್ಷ(ಸಿಪಿಐ) ತಾಲೂಕು ಘಟಕ ಶನಿವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ ಗಿರೀಶಬಾಬುಗೆ ಮನವಿ ಸಲ್ಲಿಸಿತು.

    ಇದನ್ನೂ ಓದಿ: ಹಿಮೋ ಡಯಾಲಿಸಿಸ್ ಚಿಕಿತ್ಸೆ ಪಡೆಯಲು ಆರ್ಥಿಕ ಸಮಸ್ಯೆ: ಉಚಿತ ಸೌಲಭ್ಯ ಒದಗಿಸಲು ಆರೋಗ್ಯ ಸಚಿವರಿಗೆ ಮಂಡ್ಯ ಎಂಎಲ್ಸಿ ಮನವಿ

    ಪಟ್ಟಣ ಪ್ರವಾಸಿಮಂದಿರದಿಂದ ಪ್ರತಿಭಟನಾಕಾರರು ತಾಲೂಕು ಮಿನಿವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ಮಾಡಿದರು.

    ಸಿಪಿಐ ಕಾರ್ಯದರ್ಶಿ ಗುಡಿಹಳ್ಳಿ ಹಾಲೇಶ ಮಾತನಾಡಿ, ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಆರು ಗ್ಯಾರಂಟಿಗಳನ್ನು ಜನತೆಗೆ ನೀಡಿದ್ದು, ಅದರಲ್ಲಿ ಐದು ಗ್ಯಾರಂಟಿ ಜಾರಿಗೊಳಿಸಿ ಬೆಲೆಏರಿಕೆಯಿಂದ ತತ್ತರಿಸಿದ್ದ ಜನತೆಗೆ ತಾತ್ಕಾಲಿಕವಾದಂತಹ ನೆರವು ನೀಡಿರುವುದನ್ನು ಭಾರತ ಕಮ್ಯೂನಿಸ್ಟ ಪಕ್ಷ (ಸಿಪಿಐ) ಸ್ವಾಗತಿಸುತ್ತದೆ, ಆದರೆ, ಅಸಂಘಟಿತ ಕಾರ್ಮಿಕರಿಗಾಗಿ ಘೋಷಿಸಿದ್ದ 6ನೇ ಗ್ಯಾರಂಟಿಯನ್ನು ಜಾರಿಗೊಳಿಸದಿರುವುದನ್ನು ಖಂಡಿಸಿದರು.

    ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಜತೆಗೆ ಜನಸಾಮಾನ್ಯರ ನಿತ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರವಾದ ಪ್ರತಿಭಟನೆ ಮಾಡಲಾಗುವುದು.

    ಬೇಡಿಕೆಗಳನ್ನು ಈಡೇರಿಸಿ: ಅಸಂಘಟಿತ ಕಾರ್ಮಿಕರ 6ನೇ ಗ್ಯಾರಂಟಿ ಯೋಜನೆ, ಅಂಗನವಾಡಿ ನೌಕರರಿಗೆ ಮಾಸಿಕ ವೇತನ ಹೆಚ್ಚಳ, ಹಿಂದಿನ ಸರ್ಕಾರದ ಕೃಷಿ, ಎಪಿಎಂಸಿ ಕಾಯ್ದೆ ರದ್ದುಗೊಳಿಸಬೇಕು, ರೈತರ ಮೇಲಿನ ಮೊಕ್ಕದ್ದಮೆಗಳನ್ನು ವಾಪಸ್ಸು ಪಡೆಯಬೇಕು, ಪೌರ ಕಾರ್ಮಿಕರನ್ನು ಹಾಗೂ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಬೇಕು, ವೈದ್ಯರ ನೇಮಕಾತಿ ಮಾಡಿ.

    ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ನಿವೇಶನ ರಹಿತರಿಗೆ ನಿವೇಶನ, ಹಾಗೂ ಮನೆ ಸೌಲಭ್ಯವನ್ನು ನೀಡಬೇಕು, ಬರಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ.

    ಸಮಗ್ರ ಕಲ್ಯಾಣ ಕರ್ನಾಟಕ ಯೋಜನೆಯಲ್ಲಿ ತಾಲೂಕನ್ನು ಅಭಿವೃದ್ಧಿಗೊಳಿಸಬೇಕು, ತಾಲೂಕಿನ ಗರ್ಭಗುಡಿ ಬ್ರಿಡ್ಜ್ ಕಮ್ ಬ್ಯಾರೇಜ್ ಯೋಜನೆ ಪೂರ್ಣಗೊಳಿಸಬೇಕು, ದೇವದಾಸಿ ಮಹಿಳೆಯರಿಗೆ ವಿವಿಧ ಸೌಲಭ್ಯಕಲ್ಪಿಸಿ ನಗರ ಸಾರಿಗೆ ಆರಂಭಿಸಬೇಕು, ವಸತಿ ನಿಲಯಗಳನ್ನು ಹೆಚ್ಚಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಿದರು.

    ಸಿಪಿಐ ತಾಲೂಕು ಕಾರ್ಯದರ್ಶಿ ಗುಡಿಹಳ್ಳಿ ಹಾಲೇಶ್, ಸಿಪಿಐ ಜಿಲ್ಲಾ ಉಸ್ತುವಾರಿ ಎಚ್.ಎಂ.ಸಂತೋಷ್, ಎ.ಪಿ.ಪುಷ್ಪ, ದಾದಾಪೀರ್, ಟಿ.ಬಸಮ್ಮ, ಸುಮಂಗಲ, ಎಸ್.ನಟರಾಜಪ್ಪ, ದೊಡ್ಡ ಬಸವರಾಜ, ಡಿ.ಎಚ್.ಅರುಣ್, ವಿಶಾಲಮ್ಮ, ರಂಗಪ್ಪ, ಮತ್ತಿಹಳ್ಳಿ ಅಂಜಿನಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts