

ಬೆಂಗಳೂರು: ಒಡಿಶಾದಲ್ಲಿ ಭೀಕರ ರೈಲು ಅಪಘಾತ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಕೆಲ ಮಾರ್ಗಗಳನ್ನು ಬದಲಿಸಲಾಗಿದೆ. ರೈಲು ದುರಂತದಲ್ಲಿ ಸಾವಿನ ಸಂಖ್ಯೆ 233ಕ್ಕೆ ಏರಿಕೆಯಾಗಿದ್ದು, ಸುಮಾರು 900ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಈ ಸಂದರ್ಭದಲ್ಲಿ ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದ ವಿಶೇಷ ಘಟನೆ ಬಾಲಾಸೋರ್ನಲ್ಲಿ ಬೆಳಕಿಗೆ ಬಂದಿದೆ.
18 ರೈಲುಗಳ ಸಂಚಾರವನ್ನು ರದ್ದು ಮಾಡಿ, 7 ರೈಲು ಮಾರ್ಗವನ್ನು ಬದಲಿಸಲಾಗಿದೆ ಎಂಬ ಮಾಹಿತಿ ತಿಳಿಬಂದಿದೆ. ಹೌರಾ-ಪುರಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು, ಹೌರಾ-ಬೆಂಗಳೂರು ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಹೌರಾ-ಚೆನ್ನೈ ರೈಲುಗಳು ರದ್ದಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಬಾಲಸೋರ್ನಲ್ಲಿ ನಡೆದ ಭೀಕರ ರೈಲು ಅಪಘಾತದ ನಂತರ ರಕ್ತದಾನ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ . ಅಧಿಕಾರಿಗಳ ಪ್ರಕಾರ, ಈವರೆಗೆ 233 ಜನರು ಸಾವನ್ನಪ್ಪಿದ್ದು ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ.