ಸ್ಥಗಿತಗೊಂಡ ಶುದ್ಧ ನೀರಿನ ಘಟಕ, ಗ್ರಾಮಸ್ಥರ ಪರದಾಟ

ವಿಜಯವಾಣಿ ಸುದ್ದಿಜಾಲ ಬಂಕಾಪುರ

ಹಳೇ ಬಂಕಾಪುರದಲ್ಲಿ ಕಳೆದ 15 ದಿನಗಳಿಂದ ಕೆಟ್ಟು ನಿಂತಿರುವ ಶುದ್ಧ ನೀರಿನ ಘಟಕ ದುರಸ್ತಿಗೆ ಅಧಿಕಾರಿಗಳು ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದಿ. ಕೆ.ಎಚ್. ಪಾಟೀಲ ಪ್ರತಿಷ್ಠಾನದಿಂದ ಸ್ಥಾಪಿಸಿದ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಜವಾಬ್ದಾರಿ ಹೊತ್ತ ಗ್ರಾಪಂ ಒಂದು ಕ್ಯಾನ್ ನೀರಿಗೆ 5 ರೂ. ಪಡೆಯುತ್ತಿತ್ತು. ಆದರೆ, ಈಗ ಘಟಕ ಸ್ಥಗಿತಗೊಂಡಿದ್ದರಿಂದ ಗ್ರಾಮಸ್ಥರು ಪಕ್ಕದ ಬಂಕಾಪುರ ಪಟ್ಟಣಕ್ಕೆ ಹೋಗಿ ಶುದ್ಧ ಕುಡಿಯುವ ನೀರು ತರುವಂತಾಗಿದೆ. ಕೂಡಲೆ ಸ್ಥಗಿತಗೊಂಡ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಪಂ ಪಿಡಿಒ ಶ್ರುತಿ ಇಂಗಳೆ, ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ವೆಚ್ಚ ಹೆಚ್ಚಾಗುವ ಕಾರಣ ಇಲಾಖೆ ಮೇಲಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಘಟಕ ದುರಸ್ತಿ ಮಾಡಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *