17.8 C
Bengaluru
Wednesday, January 22, 2020

ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ!

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಪರಶುರಾಮ ಕೆರಿ ಹಾವೇರಿ

ಇನ್ನೂ ಬೇಸಿಗೆಯೇ ಬಂದಿಲ್ಲ, ಆಗಲೇ ನೀರಿಗಾಗಿ ಶುರುವಾಗಿದೆ ಹಾಹಾಕಾರ. ಕೊಡ ನೀರು ಹಿಡಿಯಲು ಹಗಲು- ರಾತ್ರಿ ಜನರ ಜಾಗರಣೆ. ಜೀವಜಲಕ್ಕಾಗಿ ನಿತ್ಯ ಕಾರ್ಯ ಬಿಟ್ಟು ಸರದಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ. ಜನಸಾಮಾನ್ಯರು ಇಷ್ಟು ಸಮಸ್ಯೆ ಅನುಭವಿಸುತ್ತಿದ್ದರೂ ಅವರ ಗೋಳು ಕೇಳೋರಿಲ್ಲದಂತಾಗಿದೆ.

ಈ ಸಮಸ್ಯೆ ಇರುವುದು ತಾಲೂಕಿನ ಕಾಟೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದಲ್ಲಿ. ಬೇಸಿಗೆಗೂ ಮುನ್ನವೇ ನೀರಿನ ಸಮಸ್ಯೆ ತಲೆದೋರಿದ್ದರಿಂದ ಜನರ ಪರದಾಟದ ಜತೆಗೆ ಜಾನುವಾರುಗಳಿಗೂ ನೀರು ದೊರೆಯದಂತಾಗಿದೆ. ಇದರಿಂದ ದನಕರುಗಳನ್ನು ಮಾರಾಟ ಮಾಡುವಂತಹ ಸ್ಥಿತಿ ನಿರ್ವಣವಾಗಿದೆ. ಆದರೂ ಜಿಲ್ಲಾಡಳಿತ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸುತ್ತಿದ್ದಾರೆ ಗ್ರಾಮಸ್ಥರು.

ಹನುಮನಹಳ್ಳಿ ಗ್ರಾಮದಲ್ಲಿ ಗ್ರಾ.ಪಂ. ವತಿಯಿಂದ ಕೊರೆಸಲಾದ 4 ಕೊಳವೆಬಾವಿಗಳ ಪೈಕಿ ಕೇವಲ 2ರಲ್ಲಿ ನೀರು ಬರುತ್ತಿದ್ದು, ಇದರಿಂದಲೇ ಗ್ರಾಮಸ್ಥರು ಕುಡಿಯುವ ನೀರು ಪಡೆಯುತ್ತಿದ್ದಾರೆ. 1,100 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಈ ಹಿಂದೆ ಯುಟಿಪಿ ಕಾಲುವೆಯಲ್ಲಿ ನದಿಯ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ, 2 ವರ್ಷಗಳಿಂದ ಕನವಳ್ಳಿ ಗ್ರಾಮದಲ್ಲಿ ಕಾಲುವೆಗೆ ನೀರು ಹರಿಸದೇ ಬೇರೆ ಮಾರ್ಗವಾಗಿ ನೀರು ಬಿಡುತ್ತಿದ್ದಾರೆ. ಇದರಿಂದ ಗ್ರಾಮಕ್ಕೆ ನೀರಿನ ಸಮಸ್ಯೆ ಎದುರಾಗಿದೆ ಎಂಬುದು ಗ್ರಾಮಸ್ಥರ ಹೇಳಿಕೆ.

ಉಪಾಧ್ಯಕ್ಷರು ಗ್ರಾಮದವರು: ಕಾಟೇನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷರಾಗಿರುವ ಶೇಖಪ್ಪ ಕರಿಲಿಂಗಣ್ಣನವರ ಗ್ರಾಮದವರೇ ಆಗಿದ್ದರೂ ಈ ಸಮಸ್ಯೆ ಬಗೆಗೆ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಒದಗಿಸುವ ಕಾರ್ಯ ಮಾಡಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಫಲ ನೀಡದ ಶಾಸಕರ ಸೂಚನೆ: ಕಳೆದ ತಿಂಗಳು ಗ್ರಾಮದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ನೆಹರು ಓಲೇಕಾರ ಅವರಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದಾಗ, ಮರುದಿನವೇ ಗ್ರಾಮದಲ್ಲಿ ಸೂಕ್ತ ಸ್ಥಳ ಆಯ್ಕೆಮಾಡಿ ಕೊಳವೆಬಾವಿ ಕೊರೆಸಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಈ ಕುರಿತು ಅಧಿಕಾರಿಗಳಿಗೂ ಸೂಚನೆ ನೀಡಿದ್ದರು. ಇದುವರೆಗೂ ಯಾವ ಅಧಿಕಾರಿಗಳೂ ಗ್ರಾಮದ ಕಡೆಗೆ ಮುಖ ಮಾಡಿಲ್ಲ. ಕೊಳವೆಬಾವಿ ಕೊರೆಸಿಲ್ಲ ಎಂದು ಗ್ರಾಮಸ್ಥರಾದ ಮಂಜುನಾಥ ದಾಸಣ್ಣನವರ ವಿಜಯವಾಣಿಗೆ ತಿಳಿಸಿದ್ದಾರೆ.

ನೀರಾವರಿ ಹೊಲಗಳೇ ಗತಿ: ಗ್ರಾಮದಲ್ಲಿರುವ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ನೀರಿನ ಲಭ್ಯತೆ ಇಲ್ಲದ ಕಾರಣ ಗ್ರಾಮಸ್ಥರು ಊರ ಹೊರಗಿನ ಹೊಲಗಳ ಕೊಳವೆ ಬಾವಿಗಳಿಗೆ ತೆರಳಿ ನೀರು ತರಬೇಕಿದೆ. ಕೆಲವು ಸಲ ವಿದ್ಯುತ್ ಕೈ ಕೊಟ್ಟರೆ 5 ಕಿ.ಮೀ. ದೂರದಿಂದ ನೀರು ತರಬೇಕಾದ ಪರಿಸ್ಥಿತಿ ನಿರ್ವಣವಾಗುತ್ತದೆ.

ಹನುಮನಹಳ್ಳಿಯಲ್ಲಿ ಇಷ್ಟೆಲ್ಲ ಸಮಸ್ಯೆ ಇದ್ದರೂ ಅಧಿಕಾರಿಗಳು ಕುಂಭಕರ್ಣ ನಿದ್ದೆಯಲ್ಲಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೆ ಗ್ರಾ.ಪಂ. ಅಧಿಕಾರಿಗಳು ಎಚ್ಚೆತ್ತು ನೀರಿನ ಸಮಸ್ಯೆ ನಿವಾರಿಸದಿದ್ದರೆ ಪ್ರತಿಭಟನೆ ಅನಿವಾರ್ಯ ಎನ್ನುತ್ತಾರೆ ಗ್ರಾಮಸ್ಥರು.

ದ್ಯ ಗ್ರಾಮದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ಈಗಾಗಲೇ ನೀರು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಬಂದು ಪರಿಶೀಲಿಸಿದ್ದಾರೆ. ಅಂತರ್ಜಲ ಸಮಸ್ಯೆಯಿರುವುದರಿಂದ ಗ್ರಾಮದಲ್ಲಿ ಈಗಾಗಲೇ ಹತ್ತಾರು ಕೊಳವೆ ಬಾವಿ ಕೊರೆದರೂ ನೀರು ಬರುತ್ತಿಲ್ಲ. ನೀರಿನ ಸಮಸ್ಯೆಯಿರುವುದರಿಂದ ಮೋಟಾರ್​ಗಳು ಸುಡುತ್ತಿವೆ. ತಿಮ್ಮೇನಹಳ್ಳಿ ಬಳಿ ಕೊಳವೆಬಾವಿ ಕೊರೆದು ನೀರು ಪೂರೈಸಲು ಕ್ರಿಯಾಯೋಜನೆ ರೂಪಿಸಿದ್ದೇವೆ. 20 ದಿನಗಳ ನಂತರ ಯುಟಿಪಿ ಕಾಲುವೆ ನೀರು ಬರಲಿದ್ದು, ಎಲ್ಲ ಸಮಸ್ಯೆ ಬಗೆಹರಿಯಲಿದೆ.

| ಶಿಲ್ಪಾ ಮುದ್ದಿ, ಪಿಡಿಒ, ಕಾಟೇನಹಳ್ಳಿ ಗ್ರಾ.ಪಂ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...