More

    ಜನರಿಗೆ ತೊಂದರೆಯಾಗದಂತೆ ಕೆಲಸ ಮಾಡಿ – ರಮೇಶ ಜಾರಕಿಹೊಳಿ

    ಗೋಕಾಕ: ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೂಚಿಸಿದ್ದಾರೆ.

    ನಗರದ ತಮ್ಮ ಕಾರ್ಯಾಲಯದಲ್ಲಿ ಭಾನುವಾರ ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು, ಹಾಲು, ತರಕಾರಿ, ದಿನಸಿ ವಸ್ತುಗಳು ಯೋಗ್ಯ ದರದಲ್ಲಿ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

    ನಗರ ಹಾಗೂ ಗ್ರಾಮ ಮಟ್ಟದಲ್ಲಿ ಜನಪ್ರತಿನಿಧಿಗಳು ತಮ್ಮ ವಾರ್ಡ್‌ಗಳಲ್ಲಿ ಪ್ರತಿನಿತ್ಯ ಎರಡು ಸಲ ಜನರ ಆರೋಗ್ಯ ವಿಚಾರಿಸಿ. ಅವಶ್ಯಕತೆ ಬಿದ್ದರೆ ವೈದ್ಯರನ್ನು ಸಂರ್ಪಕಿಸಿ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಸಲಹೆ ನೀಡಿದರು.

    ಸತೀಶ-ರಮೇಶ ನಗರ ಪ್ರದಕ್ಷಿಣೆ: ಶನಿವಾರವಷ್ಟೇ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಗೋಕಾಕದಲ್ಲಿ ನಗರ ಪ್ರದಕ್ಷಿಣೆ ನಡೆಸಿ ಸಾರ್ವಜನಿಕರನ್ನು ಅನಗತ್ಯವಾಗಿ ಥಳಿಸದಂತೆ ಪೊಲೀಸರಿಗೆ ಸೂಚಿಸಿದ್ದರು. ಅದರ ಬೆನ್ನಲ್ಲೇ ಭಾನುವಾರ ನಗರಸಭೆ ಹಿರಿಯ ಸದಸ್ಯ ಎಸ್.ಎ. ಕೊತ್ವಾಲ್ ಅವರೊಂದಿಗೆ ಬೈಕ್ ಮೇಲೆ ಗೋಕಾಕ ನಗರ ಪ್ರದಕ್ಷಿಣೆ ನಡೆಸಿದ ಸಚಿವ ರಮೇಶ ಜಾರಕಿಹೊಳಿ, ಮನೆಯಿಂದ ಯಾರೂ ಹೊರಬರದಂತೆ ಸಾರ್ವಜನಿಕರಲ್ಲಿ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ.

    ದಿನಸಿ ವಿತರಣೆ: ಗೋಕಾಕ ನಗರದ ರಮೇಶಣ್ಣ ಕಾಲನಿ ಪಕ್ಕದ ಟೆಂಟ್‌ಗಳಲ್ಲಿ ವಾಸವಾಗಿರುವ ಅಲೆಮಾರಿ ಸಿದ್ಧಿ ಜನಾಂಗದವರಿಗೆ ಡಿವೈಎಸ್ಪಿ ಡಿ.ಟಿ. ಪ್ರಭು, ಸ್ಥಳೀಯರಿಂದ ತಯಾರಿಸಿದ ಆಹಾರ ಪೊಟ್ಟಣ ವಿತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts