blank

ಸಮಸ್ಯೆಯಿದ್ದಾಗ ನೆನಪಾಗುವ ನಾವು ಮತದಾನದ ವೇಳೆ ನೆನಪಾಗಲ್ಲ; ರಾಜ್ ಠಾಕ್ರೆ ಹೀಗೆಳೆದ್ದೇಕೆ? | Raj Thackrey

blank

ಮುಂಬೈ: ಜನರು ಸಮಸ್ಯೆಗೆ ಪರಿಹಾರವನ್ನು ಬಯಸಿದಾಗ ನಮ್ಮ ಪಕ್ಷದ ಬಗ್ಗೆ ಯೋಚಿಸುತ್ತಾರೆ ಆದರೆ ಚುನಾವಣಾ ಸಮಯದಲ್ಲಿ ಮತದಾನ ಮಾಡುವಾಗ ನಮ್ಮನ್ನು ನಿರ್ಲಕ್ಷಿಸುತ್ತಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ(Raj Thackrey) ಬುಧವಾರ(ಜನವರಿ 1) ಹೇಳಿದ್ದಾರೆ.

ಇದನ್ನು ಓದಿ: ಇದೇ ಬಿಜೆಪಿಯ ಎರಡು ಮುಖ; ದೆಹಲಿ ಸಿಎಂ ಅತಿಶಿ ಹೀಗೆಳಿದ್ದೇಕೆ? | Atishi

ಕೆಲವು ವಿಷಯಗಳು ಬದಲಾಗಿಲ್ಲ. ಜನರು ಪ್ರತಿ ಸಮಸ್ಯೆಯನ್ನು ಪರಿಹರಿಸಲು ಮಹಾರಾಷ್ಟ್ರ ನವನಿರ್ಮಾಣ ಸೇನೆಯನ್ನು ನೆನಪಿಸಿಕೊಳ್ಳುತ್ತಾರೆ. ಆದರೆ ಮತದಾನದ ಸಮಯದಲ್ಲಿ ನಿರ್ಲಕ್ಷಿಸುತ್ತಾರೆ. ಚುನಾವಣಾ ಫಲಿತಾಂಶ ಬಂದ ಕೆಲವೇ ವಾರಗಳಲ್ಲಿ ರಾಜ್ಯದಲ್ಲಿ ಮರಾಠಿ ಭಾಷಿಕರ ವಿರುದ್ಧ ಕಿರುಕುಳ ಆರಂಭವಾಗಿದೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ. ಈ ವಿಷಯಗಳಲ್ಲಿ ನಮ್ಮ ಪಕ್ಷ ಕ್ರಮ ತೆಗೆದುಕೊಳ್ಳುತ್ತದೆ ಎಂದು ಜನರು ನಿರೀಕ್ಷೆಯನ್ನು ಹುಸಿ ಮಾಡಲಿಲ್ಲ. ಮರಾಠಿ ಭಾಷಿಕರ ಎಂಬುದನ್ನು ಕೇವಲ ಮತಕ್ಕಾಗಿ ಬಳಸಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ 25 ವರ್ಷಗಳಲ್ಲಿ ಮುಂಬೈನಲ್ಲಿ ಬದಲಾವಣೆಗಳಾಗಿದ್ದರೂ ಜನರು ಇನ್ನೂ ಉದ್ಯೋಗಾವಕಾಶಗಳಿಲ್ಲದ ಅಭದ್ರತೆಯ ಭಾವನೆ ಹೊಂದಿದ್ದಾರೆ ಎಂದು ರಾಜ್ ಠಾಕ್ರೆ ಹೇಳಿದರು. ಯುವಕರಿಗೆ ಕೆಲಸವಿಲ್ಲದಂತಾಗಿದೆ ಎಂದ ಅವರು ಹೊರ ರಾಜ್ಯದಿಂದ ಬಂದವರಿಗೆ ಉದ್ಯೋಗಾವಕಾಶ ದೊರೆಯುತ್ತಿದೆ. ಕಾರ್ಮಿಕರಿಂದ ರೈತರು, ಬಡವರು ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಎಂಎನ್‌ಎಸ್ 288 ವಿಧಾನಸಭಾ ಸ್ಥಾನಗಳ ಪೈಕಿ 125 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದರೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆ ಕೂಡ ಮುಂಬೈನ ಮಾಹಿಮ್ ವಿಧಾನಸಭಾ ಕ್ಷೇತ್ರದಿಂದ ಸೋತಿದ್ದಾರೆ.(ಏಜೆನ್ಸೀಸ್​​)

ಸಿಎಂ ಅತಿಶಿ & ಸಂಸದ ಸಂಜಯ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ; ಕಾಂಗ್ರೆಸ್ ನಾಯಕ ಸಂದೀಪ್​​ ದೀಕ್ಷಿತ್​ ಹೀಗೆಳಿದ್ದೇಕೆ? | Sandeep Dikshit

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…