More

    ಬಸ್ ಹತ್ತಲು ಮುಗಿಬಿದ್ದ ಜನರು

    ಕೊಳ್ಳೇಗಾಲ: ಮಲೆ ಮಹದೇಶ್ವರ ಬೆಟ್ಟದ ಯುಗಾದಿ ಜಾತ್ರೆ ಹಾಗೂ ಶ್ರೀ ರಾಜ ಬೊಪ್ಪೇಗೌಡನಪುರದ ಜಾತ್ರೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ತೆರಳುತ್ತಿದ್ದರಿಂದ ಸೋಮವಾರ ಪಟ್ಟಣದಲ್ಲಿ ಬಸ್ ಹತ್ತಲು ಮುಗಿಬಿದ್ದರು.

    ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರ ಸಂಖ್ಯೆ ಮುಂಜಾನೆಯಿಂದಲೇ ಅಧಿಕವಾಗಿದ್ದರು. ಮತ್ತೊಂದೆಡೆ ರಾಜಬೊಪ್ಪೇಗೌಡನಪುರದ ಮಂಟೇಸ್ವಾಮಿ ಮಠಕ್ಕೆ ತೆರಳಲು ಸಾವಿರಾರು ಭಕ್ತರು ಆಗಮಿಸಿದ್ದರಿಂದ ಬಸ್ ನಿಲ್ದಾಣ ತುಂಬಿ ತುಳುಕುತ್ತಿತ್ತು. ಬೆಳಗ್ಗೆಯಿಂದ ಸಂಜೆವರೆಗೂ ಬಸ್ ನಿಲ್ದಾಣ ಜನಜಂಗುಳಿ ಉಂಟಾಗಿತ್ತು. ಯುಗಾದಿ ಜಾತ್ರಾ ವಿಶೇಷ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಡಿಸಿ ಅಶೋಕ್‌ಕುಮಾರ್ ಅವರು ನಿಲ್ದಾಣದಲ್ಲೇ ಖುದ್ದಾಗಿ ಇದ್ದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜನರ ಪ್ರಯಾಣಕ್ಕೆ ಬಸ್ ತೊಂದರೆ ಆಗದಂತೆ ಕಾರ್ಯನಿರ್ವಹಿಸುವಂತೆ ಸೂಚನೆ ನೀಡುತ್ತಿದ್ದರು.

    ಬಸ್ ನಿಲ್ದಾಣದಲ್ಲಿ ಇಬ್ಬರು ಕೆಎಸ್‌ಆರ್‌ಟಿಸಿ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇವರು ಬಸ್ ಯಾವ ಮಾರ್ಗಕ್ಕೆ ತೆರಳುತ್ತದೆ ಎಂಬುದರ ಬಗ್ಗೆ ಜನರಿಗೆ ಮಾಹಿತಿ ನೀಡುತ್ತಿದ್ದರು. ಇದ್ದರಿಂದ ಗ್ರಾಮಾಂತರ ಪ್ರದೇಶ ಸೇರಿದಂತೆ ಹೊರ ಜಿಲ್ಲೆಗಳಿಂದ ಬರುವ ಪ್ರಯಾಣಿಕರಿಗೆ ಸಹಕಾರಿಯಾಗಿತ್ತು.
    ಮಹದೇಶ್ವರ ಬೆಟ್ಟಕ್ಕೆ ತೆರಳುವ ಜನರ ಸಂಖ್ಯೆ ಅಧಿಕವಾಗಿರುವುದರಿಂದ 250 ಸಾರಿಗೆ ಬಸ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ಮಂಡ್ಯ, ರಾಮನಗರ, ಮೈಸೂರು ವಿಭಾಗಗಳಿಂದಲೂ ಬಸ್‌ಗಳನ್ನು ಯುಗಾದಿ ಜಾತ್ರಾ ವಿಶೇಷವಾಗಿ ನಿಯೋಜನೆ ಮಾಡಿಕೊಡಲಾಗಿದೆ. ಜತೆಗೆ ಖಾಸಗಿ ಬಸ್‌ಗಳು ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿದ್ದವು. ಬಸ್ ನಿಲ್ದಾಣದಲ್ಲಿ ಬಸ್‌ಗಳ ಸಂಖ್ಯೆ ಹೆಚ್ಚಿದ್ದ ಕಾರಣ ಡಾ.ವಿಷ್ಣುವರ್ಧನ್ ರಸ್ತೆಯಲ್ಲಿ ವಾಹನ ದಟ್ಟನೆ ಹೆಚ್ಚಾಗಿರುವುದು ಕಂಡು ಬಂದಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts