More

    ಜನತೆ ಸುನೀಲ್ ಬೋಸ್ ಗೆಲ್ಲಿಸಲಿದ್ದಾರೆ

    ತಿ.ನರಸೀಪುರ: ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷದವರ ಒಳ ಜಗಳದಿಂದ ಒಮ್ಮೆ ಮಾತ್ರ ಜೆಡಿಎಸ್ ಪಕ್ಷದವರು ಗೆದ್ದಿದ್ದರು. ಈಗ ನಮ್ಮ ಅಭ್ಯರ್ಥಿ ಸುನೀಲ್ ಬೋಸ್ ಸಹ ಗೆದ್ದಾಗಿದೆ, ಅಧಿಕೃತವಾಗಿ ಘೋಷಣೆ ಮಾಡಬೇಕಿದೆ ಅಷ್ಟೇ ಎಂದು ಪೀ ಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ವಜ್ರೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

    ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಮತ ಯಾಚನೆ ಮಾಡಿ ಅವರು ಮಾತನಾಡಿದರು.
    ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ರಾಜ್ಯದಲ್ಲಿ ದೇವೇಗೌಡರ ನಂತರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ಆಗುವ ವಿಫುಲ ಅವಕಾಶವಿದ್ದು, ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಪೀ ಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ವಜ್ರೇಗೌಡ ಮನವಿ ಮಾಡಿದರು.
    ಈ ಭಾಗದ ಮತದಾರರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಖರ್ಗೆ ಅವರಿಗೆ ಬಲ ತುಂಬಬೇಕು ಎಂಬ ಅಭಿಲಾಷೆ ಹೊಂದಿದ್ದಾರೆ. ಹಾಗಾಗಿ ಈ ಬಾರಿ ನಮ್ಮ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಹೆಚ್ಚಿನ ಮತ ನೀಡಿ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.

    ತಿ.ನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಅಂತರದಿಂದ ಗೆದ್ದರೆ ಸಚಿವ ಮಹದೇವಪ್ಪ, ಸಿಎಂ ಸಿದ್ದರಾಮಯ್ಯ ಅವರಿಗೆ ಗೌರವ ಸಿಕ್ಕಂತಾಗುತ್ತದೆ. ಅಲ್ಲದೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ 2ನೇ ಪ್ರಧಾನಿಯಾಗಿ ಖರ್ಗೆ ಆಗುವ ಸಾಧ್ಯತೆ ಇರುವುದರಿಂದ ಕ್ಷೇತ್ರದ ಮತದಾರರು ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

    ಜಿಪಂ ಮಾಜಿ ಸದಸ್ಯೆ ಸುಧಾ ಮಹದೇವಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಜಾರಿಗೆ ತಂದು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಗೃಹಲಕ್ಷ್ಮಿ ಯೋಜನೆಯಿಂದ ಎಷ್ಟೋ ಬಡ ಕುಟುಂಬದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದೆ. ಯವ ನಿಧಿಯಿಂದ ನಿರುದ್ಯೋಗಿ ಯುವಕರಿಗೆ ಸಹಾಯವಾಗಿದೆ. ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಸ್ವಾವಲಂಬನೆ ಸಾಧಿಸುವ ಕಡೆಗೆ ಹೆಜ್ಜೆ ಇಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬಡ ಜನರ ಪರವಾಗಿ ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸುನೀಲ್ ಬೋಸ್ ಅವರು ಅತ್ಯಧಿಕ ಬಹುಮತಗಳ ಅಂತರದಿಂದ ಜಯ ಸಾಧಿಸಲಿದ್ದು, ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಹೆಚ್ವಿನ ಮತ ಕೊಡಿಸುವಲ್ಲಿ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿದರು.

    ಮೈಮುಲ್ ನಿರ್ದೇಶಕ ಆರ್. ಚೆಲುವರಾಜ್, ಅನಿಲ್ ಬೋಸ್, ಜಿಪಂ ಮಾಜಿ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಮಂಜುನಾಥ, ಕೆಪಿಸಿಸಿ ಸದಸ್ಯ ಮಲ್ಲಿಕಾರ್ಜುನ ಸ್ವಾಮಿ, ತಾಪಂ ಸದಸ್ಯ ರಾಮಲಿಂಗಯ್ಯ, ಮಹದೇಶ್ವರ ಬಸ್ ಮಾಲೀಕ ಕೆ.ನಾಗೇಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ರಾಜಣ್ಣ, ಪ್ರಥಮ ದರ್ಜೆ ಗುತ್ತಿಗೆದಾರ ಸಿದ್ದರಾಮ, ಕೆ.ಎಂ.ಮಧುಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಲತಾ ಜಗದೀಶ್, ಬನ್ನೂರು ಪುರಸಭೆ ಮಾಜಿ ಅಧ್ಯಕ್ಷ ಡಿ. ಪದ್ಮನಾಭ, ಕಾಂಗ್ರೆಸ್ ಯುವ ಮುಖಂಡ ಲಕ್ಷ್ಮೀನಾರಾಯಣ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts