More

    ಯುವಕರು, ವಿದ್ಯಾವಂತರ ಆಯ್ಕೆ ಆಶಾದಾಯಕ

    ಸಾಗರ: ಸಾಮಾಜಿಕ ನ್ಯಾಯ ಬದ್ಧತೆ ಸಮ ಸಮಾಜದ ನಿರ್ಮಾಣ ಕಾಂಗ್ರೆಸ್​ನ ಪ್ರಮುಖ ಚಿಂತನೆ. ಕಾಂಗ್ರೆಸ್ ಸೈದ್ಧಾಂತಿಕ ತಳಹದಿಯ ಮೇಲೆ ಕಟ್ಟಿರುವ ಪಕ್ಷ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

    ನಗರದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಹ್ಮಮಿೊಂಡಿದ್ದ ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಅತಿಹೆಚ್ಚು ಯುವಕರು ಮತ್ತು ವಿದ್ಯಾವಂತರು ಈ ಬಾರಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿ ಬಂದಿರುವುದು ಆಶಾದಾಯಕ ಸಂಗತಿ. ಜನರು ನಿಮ್ಮಿಂದ ಉತ್ತಮ ಕೆಲಸ ನಿರೀಕ್ಷೆ ಮಾಡುತ್ತಿರುತ್ತಾರೆ. ಅವರ ನಿರೀಕ್ಷೆ ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸಲಹೆ ನೀಡಿದರು.

    ನಾವು ಚುನಾಯಿತರಾದ ಮೇಲೆ ಜನರ ಕೆಲಸ ಮಾಡಬೇಕಾದುದು ನಮ್ಮ ಜವಾಬ್ದಾರಿ. ಸಾಕಷ್ಟು ನಿರೀಕ್ಷೆಗಳಿರುತ್ತವೆ. ಅದು ಹುಸಿಯಾಗದಂತೆ ನೋಡಿಕೊಳ್ಳಬೇಕು. ಪ್ರಚಾರಕ್ಕಾಗಿ ಕೆಲಸ ಮಾಡುವುದಕ್ಕಿಂತ ಆತ್ಮತೃಪ್ತಿಗೆ ಕೆಲಸ ಮಾಡಬೇಕು. ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

    ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ಬಿಜೆಪಿಯ ಅಕ್ರಮ ಹಣ ಕೆಲಸ ಮಾಡಿಲ್ಲ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಗೆದ್ದು ಬಂದಿರುವುದು ಬಿಜೆಪಿಯ ದುರಾಡಳಿತಕ್ಕೆ ಜನರು ಕಲಿಸಿದ ಪಾಠವಾಗಿದೆ ಎಂದು ಹೇಳಿದರು.

    ರಾಜ್ಯ ಸರ್ಕಾರವರೆಗೆ ಒಂದೂ ಜನಪರ ಕಾರ್ಯಕ್ರಮ ನೀಡಿಲ್ಲ. ಶಾಸಕ ಹಾಲಪ್ಪ ಅವರು ಆಡಳಿತದಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ್ದು ಒಬ್ಬ ಗ್ರಾಪಂ ಸದಸ್ಯನನ್ನು ಗೆಲ್ಲಿಸಲು ಬೂತ್ ಮಟ್ಟದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದು ಅವರ ಅಭಿವೃದ್ಧಿ ಶೂನ್ಯ ಆಡಳಿತಕ್ಕೆ ಸಾಕ್ಷಿಯಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನವರಿ 15ರ ನಂತರ ಶಾಸಕರ ಆಡಳಿತ ವೈಫಲ್ಯ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಹಂತಹಂತವಾಗಿ ಸಭೆ ನಡೆಸಲಾಗುತ್ತದೆ. ರಾಜ್ಯ ಸರ್ಕಾರ ಹಿಂಬಾಗಿಲ ರಾಜಕಾರಣ ಮಾಡುವುದರಲ್ಲಿ ಎತ್ತಿದ ಕೈ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ವ್ಯತಿರಿಕ್ತ ಮೀಸಲಾತಿ ತಂದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಎಲ್ಲರೂ ಸಿದ್ಧವಾಗಬೇಕು ಎಂದು ಹೇಳಿದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು, ಜಿಪಂ ಸದಸ್ಯ ಕಲಗೋಡು ರತ್ನಾಕರ್, ಐ.ಎನ್.ಸುರೇಶಬಾಬು, ಭೀಮನೇರಿ ಶಿವಪ್ಪ, ಕೆ.ಹೊಳೆಯಪ್ಪ, ಎಚ್.ಎಂ.ರವಿಕುಮಾರ್, ಭರ್ಮಪ್ಪ ಅಂದಾಸುರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts