More

    ಗ್ರಾಮಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ

    ಚಿಕ್ಕಮಗಳೂರು: ಗ್ರಾಮಗಳ ಅಭಿವೃದ್ಧಿಗೆ ಮತ್ತು ಸ್ವಚ್ಛತೆಗೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಕರ್ತಿಕೆರೆ ಗ್ರಾಪಂ ಅಧ್ಯಕ್ಷೆ ಆಶಾರಾಣಿ ಗುರುಸ್ವಾಮಿ ತಿಳಿಸಿದರು.

    ಕರ್ತಿಕೆರೆ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಲ್ಲಿ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕ ಕಾಮಗಾರಿಗೆ ಗುದ್ದಲಿಪೂಜೆ ನೆರೆವೇರಿಸಿ ಮಾತನಾಡಿ, ಕೇಂದ್ರ ಸರ್ಕಾರದ ಅನುದಾನದಡಿ ಕರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಪ್ರತಿ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
    ಸಗನಿಪುರ ಹಾಗೂ ಕರ್ತಿಕೆರೆ ಗ್ರಾಮದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಯೋಜನೆಯಡಿ ಪ್ರತಿ ಮನೆಗೂ ಶೌಚಗೃಹ ಇರಬೇಕು ಎಂಬ ಕನಸು ನನಸು ಮಾಡಿರುವ ರೀತಿಯಲ್ಲೇ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದಾಗಿ ಭರವಸೆ ನೀಡಿದರು.
    ಕರ್ತಿಕೆರೆಯಲ್ಲಿ 550 ಮನೆಗಳಿದ್ದು, ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುವುದು. 3 ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
    ಗ್ರಾಪಂ ಉಪಾಧ್ಯಕ್ಷ ಗಣೇಶ್‌ರಾಜ್ ಅರಸ್, ಸದಸ್ಯ ಪುಟ್ಟಸ್ವಾಮಿ ಶೆಟ್ಟಿ, ಪಿಡಿಒ ಪ್ರೇಮಾ, ಗ್ರಾಮದ ನಾಗೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts