More

    ತೆಲಂಗಾಣದಲ್ಲಿ ಬೀಡುಬಿಟ್ಟ ಜನಪ್ರತಿನಿಧಿಗಳು

    ಕಿರುವಾರ ಎಸ್.ಸುದರ್ಶನ್ ಕೋಲಾರ
    ತೆಲಂಗಾಣ ವಿಧಾನಸಭೆ ಚುನಾವಣಾ ಅಭ್ಯರ್ಥಿಗಳ ಪರ ಜಿಲ್ಲೆಯ ಜನಪ್ರತಿನಿಧಿಗಳು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಜನತೆಯ ಸಮಸ್ಯೆಗಳನ್ನು ಮರೆತಿದ್ದಾರೆ.

    ಜಿಲ್ಲೆಯ 6 ತಾಲೂಕುಗಳನ್ನು ರಾಜ್ಯ ಸರ್ಕಾರವು ತೀವ್ರ ಬರಪೀಡಿತ ಪ್ರದೇಶಗಳೆಂದು ಈಗಾಗಲೇ ೋಷಣೆ ವಾಡಿದ್ದು ರೈತರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವ ಶಾಸಕರು, ಸಂಸದರು ಹೊರ ರಾಜ್ಯದ ಚುನಾವಣೆ ಪ್ರಚಾರದಲ್ಲಿ ತೊಗಿಸಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
    ತೆಲಂಗಾಣದಲ್ಲಿ ನ.27ರಂದು ಮತದಾನ ನಡೆಯಲಿದ್ದು, ರಾಜ್ಯದಿಂದ ಪ್ರಚಾರಕ್ಕೆ ತೆರಳಿರುವ ಶಾಸಕರು ಉಚಿತ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡುವ ಮೂಲಕ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ.
    ಇನ್ನು ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ಹಾಗೂ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟು ಬಿಜೆಪಿಗೆ ಬೆಂಬಲ ನೀಡುವಂತೆ ಕೋರುತ್ತಿದ್ದಾರೆ. ತಾಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ಪ್ರಚಾರಕ್ಕೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದರು. ಕೋಲಾರ, ವಾಲೂರು, ಕೆಜಿಎಫ್ ಶಾಸಕರು ಹಾಗೂ ಸಂಸದರು ಪ್ರಚಾರಕ್ಕಾಗಿ ಜಿಲ್ಲೆಯಿಂದ ತೆರಳಿದ್ದಾರೆ.
    ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತೆಲಂಗಾಣದಲ್ಲಿ ಚೆಂಗಲ್ ಮತ್ತು ಬೆಲ್ಲಮ್ಟಪಲ್ಲಿ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಭಾಗಿಯಾಗಿ, ಚುನಾವಣೆ ತಂತ್ರಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ಎಐಸಿಸಿ ವರಿಷ್ಠರ ನಿರ್ದೇಶನದ ಮೇರೆಗೆ ಕೆಪಿಸಿಸಿಯು ಕಾಂಗ್ರೆಸ್ ಶಾಸಕರನ್ನು ಪ್ರಚಾರ ಕಾರ್ಯಕ್ಕೆ ನಿಯೋಜನೆ ವಾಡಿದೆ. ಈಗಾಗಲೇ ಕೋಲಾರ ಶಾಸಕ ಕೊತ್ತೂರು ಜಿ.ಮಂಜುನಾಥ್, ವಾಲೂರಿನ ಕೆ.ವೈ.ನಂಜೇಗೌಡ, ಕೆಜಿಎ್ನ ಎಂ.ರೂಪಕಲಾ ಅವರು ತೆಲಂಗಾಣ ರಾಜ್ಯದ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
    ಎಐಸಿಸಿ ಹಾಗೂ ಕೆಪಿಸಿಸಿ ನೀಡಿರುವ ಜವಾಬ್ದಾರಿಯಂತೆ ತೆಲಂಗಾಣ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಕ್ಷೇತ್ರದಿಂದ ತೆರಳಿದ್ದು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ ಎಂದು ಶಾಸಕರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್‌ಗಳನ್ನು ಹಾಕಿಕೊಳ್ಳುತ್ತಿದ್ದಾರೆ. ಇದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಎಐಸಿಸಿ ಹಾಗೂ ಕೆಪಿಸಿಸಿ ನೀಡಿರುವ ಜವಾಬ್ದಾರಿಯಂತೆ ತೆಲಂಗಾಣ ರಾಜ್ಯದ ಬುಪೆನಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತ್ಯನಾರಾಯಣರಾವ್ ಪರ ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಪ್ರಚಾರದಲ್ಲಿದ್ದಾರೆ.
    ಮಿರ್ಯಾಲಗುಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಾತ್ತಲ ಲಕ್ಷ್ಮಣ ರೆಡ್ಡಿ ಪರ ಕೊತ್ತೂರು ಜಿ.ಮಂಜುನಾಥ್ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ೋಷಿಸಿರುವ ಐದು ಗ್ಯಾರಂಟಿ ಕುರಿತು ಭಾಷಣ ಮಾಡಿ ಮತಯಾಚನೆ ಮಾಡುತ್ತಿದ್ದಾರೆ.
    ಚೋಪ್ಪದಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೆಡಿಪಲ್ಲಿ ಸತ್ಯಂ ಪರ ಕೆಜಿಎಫ್ ಶಾಸಕಿ ಎಂ.ರೂಪಕಲಾ ಪ್ರಚಾರ ನಡೆಸಿದರು. ಮತದಾರರಿಗೆ ಪ್ರಚಾರದ ಚೀಟಿ ನೀಡಿ ಮತಯಾಚಿಸಿದರು.
    ಇನ್ನು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಒಂದು ವಾರದಿಂದ ತೆಲಂಗಾಣ ರಾಜ್ಯದಲ್ಲಿ ಬೀಡುಬಿಟ್ಟಿದ್ದು, ಮಕ್ತಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಲಂಧರ್‌ರೆಡ್ಡಿ ಜತೆ ಪ್ರಚಾರ ನಡೆಸುತ್ತಿದ್ದಾರೆ.

    ಜನಪ್ರತಿನಿಧಿಗಳ ವರ್ತನೆಗೆ ಸಾರ್ವಜನಿಕರ ಆಕ್ರೋಶ
    ಕ್ಷೇತ್ರಗಳಲ್ಲಿ ಶಾಸಕರು ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ನಡೆಸಿ ರೈತರು, ಕಾರ್ಮಿರು ಸೇರಿದಂತೆ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಆ ಪ್ರಕಾರ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ಮುಗಿದಿದ್ದು, ಸ್ವೀಕೃತಗೊಂಡಿರುವ ಅರ್ಜಿಗಳ ವಿಲೇವಾರಿ ಸಮರ್ಪಕವಾಗಿ ಆಗಿಲ್ಲ. ಅರ್ಜಿದಾರರು ಶಾಸಕರನ್ನು ಸಂಪರ್ಕಿಸಲು ಎಷ್ಟೇ ಪ್ರಯತ್ನಿಸುತ್ತಿದ್ದರೂ ಪ್ರಚಾರಕ್ಕೆ ತೆರಳಿರುವವರು ಲಭ್ಯವಾಗುತ್ತಿಲ್ಲ. ದೂರವಾಣಿ ಸಂಪರ್ಕಕ್ಕೂ ಸಿಗುತ್ತಿಲ್ಲ. ಇನ್ನು ಶಾಸಕರು ಕ್ಷೇತ್ರದಲ್ಲಿ ಇಲ್ಲದೆ ಇರುವುದರಿಂದ ಆಪ್ತ ಸಹಾಯಕರು ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ.

    ಕಾಂಗ್ರೆಸ್-ಬಿಜೆಪಿ ಆರೋಪ ಪ್ರತ್ಯಾರೋಪ
    ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ಮೋದಿ ವಿರುದ್ಧ ಕಾಂಗ್ರೆಸ್ ಶಾಸಕರು ಅಕ್ರೋಶ ವ್ಯಕ್ತಪಡಿಸಿದರೆ, ಬಿಜೆಪಿ ಸಂಸದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

    ಜಿಲ್ಲೆಯಲ್ಲಿ ಬರಪರಿಸ್ಥಿತಿ ಎದುರಾಗಿದೆ. ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಹೊರ ರಾಜ್ಯದ ಪ್ರಚಾರಕ್ಕೆ ತೆರಳಿದ್ದಾರೆ. ಪಕ್ಕದ ತೆಲಂಗಾಣ ರಾಜ್ಯದವರು ಹಲವು ವಿಚಾರದಲ್ಲಿ ಕರ್ನಾಟಕದ ವಿರುದ್ಧ ದಂಗೆ ಎದ್ದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಪ್ರಚಾರಕ್ಕೆ ಹೋಗಬೇಕಾದ ಅನಿವಾರ್ಯ ಏನಿತ್ತು?
    ಕೋಟಿಗಾನಹಳ್ಳಿ ಗಣೇಶ್ ಗೌಡ, ನಮ್ಮ ರೈತ ಸಂಘದ ಜಿಲ್ಲಾಧ್ಯಕ್ಷ.

    ತೆಲಂಗಾಣದಲ್ಲಿ ಬೀಡುಬಿಟ್ಟ ಜನಪ್ರತಿನಿಧಿಗಳು
    ಗಣೇಶ್ ಗೌಡ
    ತೆಲಂಗಾಣದಲ್ಲಿ ಬೀಡುಬಿಟ್ಟ ಜನಪ್ರತಿನಿಧಿಗಳು
    ತೆಲಂಗಾಣ ರಾಜ್ಯದ ಮಕ್ತಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಲಂಧರ್ ರೆಡ್ಡಿ ಪರ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಮತಯಾಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts