ಪೆರಾಬೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

New Project (82)
Published on

ಕಡಬ: ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿ ಸಂಚಾರಿ ನಿಯಮಗಳ ಬಗ್ಗೆ ಸೂಚನಾ ಫಲಕ ಅಳವಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಲು ಪೆರಾಬೆ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಗ್ರಾ.ಪಂ. ಅಧ್ಯಕ್ಷೆ ಸಂಧ್ಯಾ ಕೆ. ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಭವನದಲ್ಲಿ ಸಭೆ ನಡೆಯಿತು. ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ ಮಾಡಿ ತೆಗೆದು ಹಾಕಿದ ಮಣ್ಣನ್ನು ತೆರವುಗೊಳಿಸಿಲ್ಲ. ಇದನ್ನು ತೆರವುಗೊಳಿಸುವಂತೆಯೂ ಇಲಾಖೆಗೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು.

ಉಳಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಸಾರ್ವಜನಿಕ ಅರ್ಜಿ, ಸರ್ಕಾರಿ ಸುತ್ತೋಲೆಗಳನ್ನು ಸಭೆಗೆ ಮಂಡಿಸಿ ಚರ್ಚಿಸಲಾಯಿತು. ಗ್ರಾ.ಪಂ. ಸದಸ್ಯರಾದ ಬಿ.ಕೆ.ಕುಮಾರ, ಸದಾನಂದ ಕುಂಟ್ಯಾನ, ಪಿ.ಜಿ.ರಾಜು, ಫಯಾಝ್ ಸಿ.ಎಂ., ಮೋಹಿನಿ, ಮಮತಾ, ಕಾವೇರಿ, ಲೀಲಾವತಿ, ಮೇನ್ಸಿ, ಮೋಹನ್‌ದಾಸ್ ರೈ ಉಪಸ್ಥಿತರಿದ್ದರು. ಪಿಡಿಒ ಶಾಲಿನಿ ಕೆ.ಬಿ. ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net