More

    ಪೀರನವಾಡಿ ಗ್ರಾಮ ಪ್ರವೇಶಕ್ಕೆ ನಿಷೇಧ

    ಬೆಳಗಾವಿ: ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕರೊನಾ ವೈರಸ್ ದೃಢಪಟ್ಟಿದ್ದರಿಂದ ಗ್ರಾಮದ ಭೌಗೋಳಿಕ ಪ್ರದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿತ (ಕಂಟೋನ್ಮೆಂಟ್ ಝೋನ್) ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

    ಗ್ರಾಮದ ನಿವಾಸಿಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಆದೇಶ ಮಾಡಲಾಗಿದೆ. ಅದರಂತೆ ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ. ವ್ಯಾಪ್ತಿಯನ್ನು ಬಫರ್ ರೆನ್ ಎಂದು ಘೋಷಿಸಲಾಗಿದೆ. ಗ್ರಾಮದ 3 ಕಿ.ಮೀ. ವ್ಯಾಪ್ತಿಯಲ್ಲಿ ಯಾರೂ ಸಹ ಕಾಲ್ನಡಿಗೆ, ಇನ್ಯಾವುದೋ ವಾಹನಗಳ ಮೂಲಕ ಒಳ ಪ್ರವೇಶಿಸುವುದು ಹಾಗೂ ನಿರ್ಗಮಿಸುವುದನ್ನು ನಿರ್ಬಂಧಿಸಲಾಗಿದೆ. ಕರ್ತವ್ಯ ನಿರತ ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.

    ಸದರಿ ನಿಷೇಧಿತ ಪ್ರದೇಶಗಳ 3 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ನಿವಾಸಿಗಳು ಮುಂದಿನ ಆದೇಶದವರೆಗೆ ಮನೆಗಳಲ್ಲಿಯೇ ಇದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸಲಹೆ ಸೂಚನೆ ಪಾಲಿಸಬೇಕು. ನಿಷೇಧಿತ ಪ್ರದೇಶದಲ್ಲಿನ ಎಲ್ಲ ಕಚೇರಿಗಳು (ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ), ಅಂಗಡಿ, ಮಳಿಗೆ, ದಾಸ್ತಾನು ಕೇಂದ್ರಗಳನ್ನು (ದಿನಸಿ, ಹಾಲು, ಹಣ್ಣು, ತರಕಾರಿ ಮತ್ತು ಔಷಧ ಅಂಗಡಿಗಳು ಹೊರತುಪಡಿಸಿ) ಬಂದ್ ಮಾಡಬೇಕು. ಅಗತ್ಯ ವಸ್ತುಗಳನ್ನು ಬೆಳಗ್ಗೆ 8ರಿಂದ 10 ಗಂಟೆವರೆಗೆ ಮಾತ್ರ ಖರೀದಿಸಲು ಅವಕಾಶವಿರುತ್ತದೆ.

    ಆದೇಶವನ್ನು ಕಟ್ಟುನಿಟ್ಟಾಗಿ ಕಾರ್ಯಗತಗೊಳಿಸಲು ಪೀರನವಾಡಿ ಪಿಡಿಒ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಆದೇಶ ಜಾರಿಗೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts