More

    ಸಂವಿಧಾನ ಆಶಯಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಿ

    ಸುಂಟಿಕೊಪ್ಪ: ಕೊಡಗರಹಳ್ಳಿಗೆ ಗುರುವಾರ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಉಪ್ಪುತೋಡು ಬಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎನ್.ಸಿ.ನಿರುತ ಬೆಳ್ಳಿಯಪ್ಪ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯಾಧಿಕಾರಿ ಡಾ.ಸತೀಶ್‌ಕುಮಾರ್ ನೇತೃತ್ವದ ತಂಡ ಸ್ವಾಗತ ಕೋರಿತು.

    ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆ ಬಳಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಶಿಕ್ಷಕಿ ಮಮತಾ, ಭಾರತದ ಸಂವಿಧಾನ ಜಗತ್ತಿನ ಶೇಷ್ಠ ಸಂವಿಧಾನಗಳಲ್ಲಿ ಒಂದು. ಕಾಲಕಾಲಕ್ಕೆ ಮಾಡಿದ ತಿದ್ದುಪಡಿ ಹಿನ್ನೆಲೆಯಲ್ಲಿ ಸಂವಿಧಾನ ಹೆಚ್ಚು ಪರಿಷ್ಕೃತ ಮತ್ತು ಸ್ಪಷ್ಟತೆ ಹೊಂದಿದೆ ಎಂದು ಬಣ್ಣಿಸಿದರು.
    ಸಂವಿಧಾನದಲ್ಲಿ ನಾಗರಿಕರ ಹಕ್ಕುಗಳು ಕರ್ತವ್ಯದ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದೆ. ಎಲ್ಲರೂ ಸಂವಿಧಾನ ಆಶಯಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು.

    ಸಂವಿಧಾನ ಜಾಗೃತಿ ಜಾಥಾದ ನೋಡಲ್ ಅಧಿಕಾರಿ ಭಾಗ್ಯಮ್ಮ ಸಂವಿಧಾನ ಪ್ರತಿಜ್ಞಾವಿಧಿ ಬೋಧಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಕಲಾಮಣಿ, ಬಸವಿ, ನೀತಾ ಹರೀಶ್, ರೂಬಿ, ಸಿಬ್ಬಂದಿ ಧನ್ಯಾ, ಅಣ್ಣಪ್ಪ, ಕೆ.ಎಸ್.ಧನಂಜಯ, 7ನೇ ಹೊಸಕೋಟೆ ಗ್ರಾ.ಪಂಚಾಯಿತಿ ಅಧ್ಯಕ್ಷ ಜೋಸೆಫ್ ಇತರರು ಉಪಸ್ಥಿತರಿದ್ದರು.

    ಕಾರ್ಯಕ್ರಮದ ಅಂಗವಾಗಿ ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ ಮಹಿಳಾ ಸದಸ್ಯರು ಹಾಗೂ ಸಿಬ್ಬಂದಿ ದೇಶಭಕ್ತಿ ಗೀತೆಯೊ ಂದಕ್ಕೆ ನೃತ್ಯ ಪ್ರದರ್ಶನ ನೀಡಿದರು. ಗ್ರಾಪಂ ಅಧ್ಯಕ್ಷೆ ಎನ್.ಸಿ.ನಿರುತಾ ಬೆಳ್ಳಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸೋಮವಾರಪೇಟೆ ತಾಲೂಕು ಸಹಾಯಕ ನಿರ್ದೇಶಕ ಸಿದ್ಧೇಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ.ಹಿಂದೂದರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts