More

    ಗೋಶಾಲೆಗಳಿಗೆ 200 ಕೋಟಿ ರೂ.ಸಾಂತ್ವನ ನಿಧಿ ವಿತ್ತ ಸಚಿವರಿಗೆ ಪೇಜಾವರ ಶ್ರೀ ಪತ್ರ

    ಉಡುಪಿ: ಕರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ. ತುರ್ತು ಸಾಂತ್ವನ ನಿಧಿ ಮಂಜೂರು ಮಾಡುವಂತೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

    ಕರೊನಾ ಪರಿಣಾಮ, ಅನೇಕ ತಿಂಗಳುಗಳಿಂದ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕ. ಉಡುಪಿ ಸಮೀಪ ನೀಲಾವರ, ಕೊಡವೂರು, ಹೆಬ್ರಿಯಲ್ಲಿ ಮಠದಿಂದ ನಿರ್ವಹಿಸಲಾಗುತ್ತಿರುವ ಗೋಶಾಲೆಗಳಿಗೆ ಮಾಸಿಕ 35 ಲಕ್ಷ ರೂ.ವೆಚ್ಚವಾಗುತ್ತಿದೆ.

    ಇದೇ ರೀತಿಯಲ್ಲಿ ದೇಶದಲ್ಲಿ ಅನೇಕ ಮಠ, ಮಂದಿರಗಳು, ಸಂಘ, ಸಂಸ್ಥೆಗಳು ಪ್ರತಿಫಲಾಪೇಕ್ಷೆಯಿಲ್ಲದೆ ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿವೆ. ಪ್ರಸ್ತುತ ದೇಣಿಗೆಯೂ ಸಿಗುತ್ತಿಲ್ಲ. ಆದ್ದರಿಂದ ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ನೋಂದಾಯಿತ ಗೋಶಾಲೆಗಳಿಗೂ ಅನುದಾನ ನೀಡಬೇಕು. ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು ಎಂದು ಪೇಜಾವರ ಶ್ರೀಗಳು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts