ಪೆರ್ಲ ಕೃಷ್ಣ ಭಟ್ಟ ಸಂಸ್ಮರಣೆ

New Project (22)
Published on

ಪೆರ್ಲ: ಅಧ್ಯಾಪಕ, ಅರ್ಥಧಾರಿ, ವಿದ್ವಾಂಸ, ಹಿಂದಿ ಪಂಡಿತ, ಲೇಖಕರಾಗಿದ್ದ ದಿ.ಪೆರ್ಲ ಕೃಷ್ಣ ಭಟ್ಟರ ನೂರರ ನೆನಪು ಕಾರ್ಯಕ್ರಮ ಪೆರ್ಲದ ಭಾರತಿ ಸದನದಲ್ಲಿ ಭಾನುವಾರ ಜರುಗಿತು.

ಪೆರ್ಲ ಕೃಷ್ಣ ಭಟ್ಟ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶಾಂಭಟ್ ಅಧ್ಯಕ್ಷತೆ ವಹಿಸಿದ್ದರು. ಆರ್.ಎಸ್.ಎಸ್. ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ಟ ಸಂಸ್ಮರಣಾ ಭಾಷಣ ಮಾಡಿದರು. ಹಿರಿಯ ಅರ್ಥದಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಕೃಷ್ಣ ಭಟ್ಟರ ಶತಮಾನೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಾ.ಎಂ.ಪ್ರಭಾಕರ ಜೋಷಿ ಅಭಿನಂದನಾ ಭಾಷಣ ಮಾಡಿದರು. ಕೊಲ್ಲೂರು ದೇವಳದ ಮಾಜಿ ಆಡಳಿತ ಮೊಕ್ತೇಸರ ಕೃಷ್ಣ ಪ್ರಸಾದ ಅಡ್ಯಂತಾಯ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಕಾರ್ಯದರ್ಶಿ ರಾಜಾರಾಮ, ಅನುಕ್ತ ಪ್ರಾರ್ಥನೆ ಹಾಡಿದರು. ಡಾ.ಶ್ರೀಪತಿ ಕಜಂಪಾಡಿ ವಂದಿಸಿದರು. ನಿವೃತ್ತ ಶಿಕ್ಷಕ ರಾಜೇಂದ್ರ ಬಜಕೂಡ್ಳು ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net