More

    ಕಾಯಂ ಪೀಠ ಆರಂಭಿಸಲು ಒತ್ತಾಯ

    ಬೆಳಗಾವಿ: ನಗರದಲ್ಲಿ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಕಾಯಂ ಪೀಠ ಆರಂಭಿಸಬೇಕು ಎಂದು ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹಿಂದ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
    5 ವರ್ಷಗಳಿಂದ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಕಾಯಂ ಪೀಠವನ್ನು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ನಡೆಸಿರುವ ಪರಿಣಾಮ ಬೆಳಗಾವಿಯಲ್ಲಿ ಪೀಠ ಸ್ಥಾಪನೆಗೆ ಶಿಾರಸು ಮಾಡಿ ಕಟ್ಟಡ ಗುರುತಿಸಲಾಗಿದೆ. ಆದರೆ, ಇಲ್ಲಿಯವರೆಗೆ ಪೀಠ ಕಾರ್ಯಾರಂಭ ಮಾಡಿಲ್ಲ. ಕೂಡಲೇ ಪೀಠ ಕಾರ್ಯಾರಂಭ ಮಾಡಲು ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

    ಬೆಳಗಾವಿ ಮಹಾನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಹಾಗೂ ಸೌಹಾರ್ದ ಸೊಸೈಟಿಗಳು ಠೇವಣಿದಾರರಿಗೆ ವಂಚನೆ ಮಾಡುತ್ತಿವೆ. ಠೇವಣಿದಾರರು ಬೆಂಗಳೂರಿಗೆ ಹೋಗಿ ದಾಖಲೆಗಳನ್ನು ನೀಡಬೇಕಾದ ಪರಿಸ್ಥಿತಿ ಬಂದಿದೆ. ಮಹಿಳೆಯರು, ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗಿ ಬರುವುದು ಕಷ್ಟವಾಗುತ್ತಿದೆ. ಹಾಗಾಗಿ, ಕೂಡಲೇ ಕೆಪಿಐಡಿ ನ್ಯಾಯಾಲಯ ಸ್ಥಾಪನೆ ಮಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು. ವಕೀಲ ಎನ್.ಆರ್.ಲಾತೂರ್, ವಿ.ಎಸ್.ಪಾಟೀಲ, ನಿಂಗಪ್ಪ ಮಾಸ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts