

ಕಡಬ: ಕಾಣಿಯೂರು ಪಂಚಾಯಿತಿ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.
ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯಾಧಿಕಾರಿ ಸಹಿತ ಖಾಲಿಯಿರುವ ಎಲ್ಲ ಸಿಬ್ಬಂದಿಗಳ ನೇಮಕ ಆಗಬೇಕು. ಜತೆಗೆ ಅಗತ್ಯವಾಗಿ ಲ್ಯಾಬ್ ಟೆಕ್ನಿಷಿಯನ್ ಒದಗಿಸಲು ಸಂಬಂಧಪಟ್ಟವರಿಗೆ ಬರೆಯಲು ಗ್ರಾ.ಪಂ. ಸದಸ್ಯ ಗಣೇಶ್ ಉದನಡ್ಕ ಒತ್ತಾಯಿಸಿದರು. ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
*ಅಪಾಯಕಾರಿ ಮರ ತೆರವು: ಚಾರ್ವಾಕ ಗ್ರಾಮದ ಗಾಳಿಬೆಟ್ಟು ಅಂಗನವಾಡಿ ಕೇಂದ್ರದ ಬಳಿ ಇರುವ ಅಪಾಯಕಾರಿ ಮರವನ್ನು ತೆರವುಗೊಳಿಸುವಂತೆ ಸದಸ್ಯ ಗಣೇಶ್ ಉದನಡ್ಕ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿ ಅವರಲ್ಲಿ ಒತ್ತಾಯಿಸಿದರು. ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಕೃಷಿ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಕೊಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಸಭೆಯಲ್ಲಿ ಚರ್ಚೆಗಳು ನಡೆದಾಗ ಮಾತ್ರ ಗ್ರಾಮದ ಅಭಿವೃದ್ಧಿ ಸಾಧ್ಯ. ಗ್ರಾಮದ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ ಎಂದರು.
ಗ್ರಾ.ಪಂ. ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಸದಸ್ಯರಾದ ಗಣೇಶ್ ಉದನಡ್ಕ, ರಾಮಣ್ಣ ಗೌಡ ಮುಗರಂಜ, ಪ್ರವೀಣ್ಚಂದ್ರ ರೈ ಕುಮೇರು, ವಸಂತ ಪೆರ್ಲೋಡಿ, ದೇವಿಪ್ರಸಾದ್ ದೋಳ್ಪಾಡಿ, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ಲಲಿತಾ ದರ್ಖಾಸು, ಸುನಂದ ಅಬ್ಬಡ, ಕೀರ್ತಿಕುಮಾರಿ ಅಂಬುಲ, ತೇಜಕುಮಾರಿ ಉದ್ಲಡ್ಡ, ಸುಲೋಚನಾ ಮಿಯೋಳ್ಪೆ, ಅಂಬಾಕ್ಷಿ ಕೂರೇಲು, ಮೀರಾ ಉಪಸ್ಥಿತರಿದ್ದರು.
ಪಿಡಿಒ ರಘು ಎನ್.ಬಿ.ನಿರ್ವಹಿಸಿದರು. ಸದಸ್ಯರಾದ ರಾಮಣ್ಣ ಗೌಡ ಮುಗರಂಜ ಸ್ವಾಗತಿಸಿದರು. ಪ್ರವೀಣ್ಚಂದ್ರ ರೈ ಕುಮೇರು ವಂದಿಸಿದರು. ಸಿಬ್ಬಂದಿ ತಿಮ್ಮಪ್ಪ ಗೌಡ ಬೀರುಕುಡಿಕೆ ವರದಿ ವಾಚಿಸಿದರು.
ಹಳೇ ವಿದ್ಯುತ್ ತಂತಿಯಿಂದ ಅಪಾಯ
ಚಾರ್ವಾಕ ಗ್ರಾಮದ ಬಾರೆಂಗಳ-ಚಾರ್ವಾಕ, ಕಾಣಿಯೂರು ಗ್ರಾಮದ ನಾವೂರು ದೇವಸ್ಥಾನದ ಸಮೀಪ, ಕಾಣಿಯೂರು ಗ್ರಾಮದ ಮಾಳ ಎಂಬಲ್ಲಿ ವಿದ್ಯುತ್ ಲೈನ್ನಲ್ಲಿ ಹಳೇ ವಿದ್ಯುತ್ ತಂತಿ ಇರುವುದರಿಂದ ಅಪಾಯದ ಸ್ಥಿತಿಯಲ್ಲಿದೆ. ಈ ನಿಟ್ಟಿನಲ್ಲಿ ವಿದ್ಯುತ್ ತಂತಿ ಬದಲಾವಣೆ ಅಗತ್ಯವಾಗಿ ಆಗಬೇಕಾಗಿದೆ ಗ್ರಾಮಸ್ಥರು ಒತ್ತಾಯಿಸಿದರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು.