22.5 C
Bengaluru
Sunday, January 19, 2020

ಕಡಲ್ಕೊರೆತ ಸಮಸ್ಯೆ ಶಾಶ್ವತ

Latest News

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಬಿ.ರಾಘವೇಂದ್ರ ಪೈ ಗಂಗೊಳ್ಳಿ
ಕಡಲ್ಕೊರೆತ ತಡೆಯುವ ಉದ್ದೇಶದಿಂದ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗೊಳ್ಳಿ ಬಂದರು ಬೇಲಿಕೇರಿ ಮತ್ತು ಖಾರ್ವಿಕೇರಿ ಕಡಲ ತೀರದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಶಾಶ್ವತ ತಡೆಗೋಡೆ ವರ್ಷದೊಳಗೆ ಕುಸಿಯಲಾರಂಭಿಸಿದೆ. ಬೇಲಿಕೇರಿ ಹಾಗೂ ಖಾರ್ವಿಕೇರಿ ಪ್ರದೇಶದಲ್ಲಿ ಕಡಲ್ಕೊರೆತ ತಡೆಗೆ ತಲಾ ೩ ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ತಡೆಗೋಡೆ ನಿರ್ಮಾಣ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿಲ್ಲ ಎಂಬ ಆರೋಪ ತಡೆಗೋಡೆ ಕಾಮಗಾರಿ ಆರಂಭದಿಂದಲೂ ಕೇಳಿ ಬಂದಿತ್ತು. ಈ ಬಗ್ಗೆ ಗುತ್ತಿಗೆದಾರರಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು.

ಬೇಲಿಕೇರಿ ಪ್ರದೇಶದ ಕಡಲ್ಕೊರೆತ ತಡೆಗೋಡೆಯ ಉತ್ತರ ದಿಕ್ಕಿನಲ್ಲಿ ಕಲ್ಲುಗಳು ಕುಸಿದು ಕಡಲ ಒಡಲು ಸೇರಲಾರಂಭಿಸಿವೆ. ತಡೆಗೋಡೆ ಕಲ್ಲುಗಳು ಕಡಲ ತೀರದಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡು ಬಿದ್ದಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಕುಸಿದು ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಅಂದಾಜುಪಟ್ಟಿಯಂತೆ ಕೆಲಸ ನಡೆಯುತ್ತಿಲ್ಲ ಎಂದು ಅನೇಕ ಬಾರಿ ಸ್ಥಳೀಯರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಪ್ರಸ್ತುತ ತಡೆಗೋಡೆ ಕುಸಿಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕಡಲು ಪ್ರಕ್ಷುಬ್ಧವಾಗದೆಯೂ ಕುಸಿತ: ಎರಡು ವರ್ಷಗಳಿಂದ ಮಳೆಗಾಲ ಸಂದರ್ಭ ಈ ಭಾಗದಲ್ಲಿ ನಿರಂತರ ಕಡಲ್ಕೊರೆತ ಸಂಭವಿಸುತ್ತಿದ್ದು, ಕಡಲ್ಕೊರೆತ ತಡೆಯಲು ಪ್ರತಿವರ್ಷ ಸಮುದ್ರಕ್ಕೆ ಕಲ್ಲು ಹಾಕುವ ಕೆಲಸ ನಡೆಯುತ್ತಿತ್ತು. ಕಡಲ್ಕೊರೆತದಿಂದ ಕೆಲವು ಮನೆಗಳಿಗೆ ಹಾನಿಯುಂಟಾಗಿತ್ತು. ಹೀಗಾಗಿ ಸರ್ಕಾರ ೨೦೧೭-೧೮ನೇ ಸಾಲಿನಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ೩ ಕೋಟಿ ರೂ. ಅನುದಾನ ಮಂಜೂರು ಮಾಡಿ ಕಾಮಗಾರಿ ಪ್ರಾರಂಭಿಸಲು ಸೂಚಿಸಿತ್ತು. ಈ ಬಾರಿ ಸಮುದ್ರ ಅಷ್ಟೊಂದು ಪ್ರಕ್ಷುಬ್ಧಗೊಂಡಿರಲಿಲ್ಲ ಮತ್ತು ಕಳೆದ ವರ್ಷಕ್ಕೆ ಹೋಲಿಸಿದರೆ ಭಾರಿ ದೊಡ್ಡ ದೊಡ್ಡ ಅಲೆಗಳು ತಡೆಗೋಡೆಗೆ ಅಪ್ಪಳಿಸಿಲ್ಲ. ಆದರೂ ತಡೆಗೋಡೆ ಕುಸಿಯುತ್ತಿರುವುದು ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶಾಶ್ವತ ತಡೆಗೋಡೆ ಪುನಃ ರಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕಾಮಗಾರಿ ಪೂರ್ಣಗೊಂಡ ಎರಡು ವರ್ಷದಲ್ಲಿ ತಡೆಗೋಡೆ ಕುಸಿಯುತ್ತಿರುವುದು ಕಳಪೆ ಕಾಮಗಾರಿಗೆ ಸ್ಪಷ್ಟ ನಿದರ್ಶನವಾಗಿದೆ. ಕಡಲಿನ ಅಬ್ಬರ ಜೋರಾಗಿಲ್ಲದಿದ್ದರೂ ತಡೆಗೋಡೆ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆರಂಭದಿಂದಲೂ ಕಾಮಗಾರಿ ಬಗ್ಗೆ ಅಪಸ್ವರ ಕೇಳಿ ಬಂದಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಗಂಗಾಧರ, ಗಂಗೊಳ್ಳಿ ಬೇಲಿಕೇರಿ ನಿವಾಸಿ

ಶಾಶ್ವತ ತಡೆಗೋಡೆ ನಿರ್ಮಾಣದ ಹೆಸರಿನಲ್ಲಿ ಕೋಟ್ಯಾಂತರ ರೂ. ಅನುದಾನವನ್ನು ಕೊಳ್ಳೆ ಹೊಡೆಯಲಾಗಿದೆ. ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದ್ದು, ಈ ಕಾಮಗಾರಿ ಶಾಶ್ವತವಾಗಿ ನಿಲ್ಲುವುದು ಅನುಮಾನ. ಅಂದಾಜುಪಟ್ಟಿಯಲ್ಲಿರುವಂತೆ ಕಾಮಗಾರಿ ನಿರ್ವಹಿಸಿಲ್ಲ. ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ಕಳಪೆ ಕಾಮಗಾರಿ ಬಗ್ಗೆ ಸೂಕ್ತ ತನಿಖೆಯಾಗಬೇಕು. ಶಾಶ್ವತ ತಡೆಗೋಡೆ ವ್ಯವಸ್ಥಿತವಾಗಿ ನಿರ್ಮಾಣವಾಗಬೇಕು.
ಚಂದ್ರ ಖಾರ್ವಿ, ಗಂಗೊಳ್ಳಿ ಲೈಟ್‌ಹೌಸ್ ನಿವಾಸಿ.

ಈ ವರ್ಷ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವುದರಿಂದ ತಡೆಗೋಡೆಯಲ್ಲಿ ಸಣ್ಣ ಪ್ರಮಾಣ ಕುಸಿತ ಕಂಡು ಬಂದಿದ್ದು, ಪ್ರತಿವರ್ಷ ಇಂಥ ಕುಸಿತ ಸಹಜವಾಗಿದೆ. ಗಂಗೊಳ್ಳಿಯ ಖಾರ್ವಿಕೇರಿ ಮತ್ತು ಬೇಲಿಕೇರಿ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಶಾಶ್ವತ ತಡೆಗೋಡೆ ಕೆಲವು ಕಡೆಗಳಲ್ಲಿ ಕುಸಿತವಾಗಿದ್ದು, ಅದನ್ನು ಪರಿಶೀಲಿಸಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ತಡೆಗೋಡೆ ಎತ್ತರ ಹೆಚ್ಚು ಮಾಡಿ ನಿರ್ಮಿಸಿರುವುದರಿಂದ ವಾಸ್ತವ್ಯದ ಮನೆಗಳಿಗೆ ಯಾವುದೇ ಅಪಾಯವಿಲ್ಲ.
ವಿಜಯ ಶೆಟ್ಟಿ, ಇಂಜಿನಿಯರ್, ಬಂದರು ಇಲಾಖೆ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...