More

    ನವೆಂಬರ್ ಅಂತ್ಯದಿಂದ ಕರಾವಳಿಯಲ್ಲಿ ಯಕ್ಷಗಾನ ತಿರುಗಾಟಕ್ಕೆ ಅನುಮತಿ

    ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗರೂಕತಾ ಕ್ರಮಗಳೊಂದಿಗೆ ನವೆಂಬರ್ ಅಂತ್ಯದಿಂದಲೇ ಯಕ್ಷಗಾನ ಪ್ರದರ್ಶನ ಪುನರಾರಂಭಗೊಳಿಸುವುದಕ್ಕೆ ಅಧಿಕೃತ ಅನುಮತಿ ನೀಡಲಾಗಿದೆ.

    ಮಂಗಳವಾರ ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಧಾರ್ಮಿಕ ಮತ್ತು ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಮಾತನಾಡಿ, ಕೋವಿಡ್‌ನಿಂದಾಗಿ ಯಕ್ಷಗಾನ ಕಲಾವಿದರ ಸ್ಥಿತಿ ಸಂಕಷ್ಟದಲ್ಲಿ ಸಿಲುಕಿದ್ದು, ಯಾವುದೇ ಕಲಾವಿದನಿಗೆ ಅನ್ಯಾಯವಾಗದಂತೆ ಶೀಘ್ರದಲ್ಲಿಯೇ ಸರ್ಕಾರದಿಂದ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನೂ ನೀಡಿದರು.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕಲಾವಿದರು ಮತ್ತು ಪೂರಕ ಕೆಲಸಗಾರರಿದ್ದಾರೆ. ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಬಯಲಾಟ ಆರಂಭವಾಗಲಿದೆ.

    ಕಲಾವಿದರ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕಾಗಿ ಸರ್ಕಾರದ ಮಾರ್ಗಸೂಚಿಯಂತೆ ಆರೋಗ್ಯ ಇಲಾಖೆಯ ವತಿಯಿಂದ ಯಕ್ಷಗಾನ ಕಲಾವಿದರು ಯಕ್ಷಗಾನ ತಿರುಗಾಟ ಪ್ರಾರಂಭಕ್ಕೂ ಮುನ್ನ ಕಡ್ಡಾಯವಾಗಿ ಕರೋನಾ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಇದರ ಜೊತೆಗೆ ಯಕ್ಷಗಾನ ಮೇಳಗಳಲ್ಲಿಯೂ ಸಹ ವಾರಕ್ಕೆ ಒಂದು ಬಾರಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕೆಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts