ಗಣೇಶೋತ್ಸವ ಆಚರಣೆಗೆ ಅನುಮತಿ ಕಡ್ಡಾಯ

ganesha
ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿ ಪ್ರಮುಖರ ಶಾಂತಿ ಸಭೆಯಲ್ಲಿ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ ಮಾತನಾಡಿದರು
Published on

ಗಂಗೊಳ್ಳಿ: ಗಣೇಶೋತ್ಸವಗಳನ್ನು ಶ್ರದ್ಧಾ ಭಾವನೆಗಳಿಂದ ವಿಜೃಂಭಣೆಯಿಂದ ಆಚರಿಸಬೇಕು. ಗಣೇಶೋತ್ಸವ ಆಚರಣೆ ಸಂಬಂಧ ಅಗತ್ಯವಿರುವ ಅನುಮತಿ ಸಂಬಂಧಪಟ್ಟ ಇಲಾಖೆ ಹಾಗೂ ಸ್ಥಳೀಯಾಡಳಿತಗಳಿಂದ ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ ಹೇಳಿದರು.

ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ಗಣೇಶೋತ್ಸವದ ಪೂರ್ವಭಾವಿಯಾಗಿ ತ್ರಾಸಿಯಲ್ಲಿ ಶುಕ್ರವಾರ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿ ಪ್ರಮುಖರ ಶಾಂತಿ ಸಭೆಯಲ್ಲಿ ಮಾತನಾಡಿದರು.

ಗಣೇಶ ಮೂರ್ತಿ ವಿಸರ್ಜನೆ ಮಾರ್ಗವನ್ನು ಪೊಲೀಸ್ ಇಲಾಖೆಗೆ ಮುಂಚಿತವಾಗಿ ತಿಳಿಸಿ ಅದೇ ಮಾರ್ಗದಲ್ಲಿ ಮೆರವಣಿಗೆ ನಡೆಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಸರಕಾರದ ನಿಯಮಗಳಿಗನುಸಾರ ಗಣೇಶೋತ್ಸವ ಆಚರಿಸಿದರೆ ಹಬ್ಬಕ್ಕೆ ಇನ್ನಷ್ಟು ಮೆರುಗು ಬರುತ್ತದೆ ಎಂದರು.

ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕ ಹರೀಶ್ ಆರ್. ಮಾಹಿತಿ ನೀಡಿದರು. ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕ (ತನಿಖೆ) ಬಸವರಾಜ್, ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

ಸಾರ್ವಜನಿಕ ಸ್ಥಳದಲ್ಲಿ ಗಣೇಶೋತ್ಸವ ನಡೆಸಲು ಸ್ಥಳೀಯಾಡಳಿತದಿಂದ ಅನುಮತಿ ಪಡೆಯಬೇಕು. ಭದ್ರತೆಗಾಗಿ ಸಿಸಿ ಕ್ಯಾಮರಾ ಅಳವಡಿಸಿ ಸ್ವಯಂಸೇವಕರನ್ನು ನಿಯೋಜಿಸಬೇಕು. ಸರ್ಕಾರ ಹಾಗೂ ಇಲಾಖೆ ಸೂಚನೆ, ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಿ ಇಲಾಖೆಯೊಂದಿಗೆ ಸಹಕರಿಸಬೇಕು.-ಹರೀಶ್ ಆರ್. ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net