More

    ನಿರಂತರ ಪರಿಶ್ರಮವೇ ಯಶಸ್ಸಿನ ಗುಟ್ಟು

    ಚಿಕ್ಕಮಗಳೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನರ ಬೇಡಿಕೆಗಳನ್ನು ಪೂರೈಸಿ ಜೀವನಮಟ್ಟ ಸುಧಾರಣೆಯೊಂದಿಗೆ ಸ್ವಾವಲಂಬಿ ಜೀವನಕ್ಕೆ ಕಾಯಕಲ್ಪ ನೀಡಿದೆ ಎಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ.ತಾರಾದೇವಿ ತಿಳಿಸಿದರು.

    ನಗರದ ಮಲ್ಲಂದೂರು ರಸ್ತೆ ಸಮೀಪದ ಸ್ಫೂರ್ತಿ ಸೌಧದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮಗಳೂರು-2 ಯುವಜನ ಕಚೇರಿಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.
    ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳ ಸೇವಾ ಕಳವಳಿ. ಫಲಾನುಭವಿಗಳ ನಿರಂತರ ಪರಿಶ್ರಮ ಮತ್ತು ಪ್ರಯತ್ನವೇ ಯೋಜನೆಯ ಯಶಸ್ಸಿನ ಗುಟ್ಟು. ಧರ್ಮಸ್ಥಳ ಯೋಜನೆಯ ಸಮಾಜಮುಖಿ ಕಾರ್ಯಕ್ರಮಗಳು ನೂರಾರು. ಅವುಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು ಧರ್ಮಾಧಿಕಾರಿಗಳ ಆಶಯ. ಆಯಾ ಭಾಗದ ಜನರ ಸಹಕಾರದೊಂದಿಗೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇನ್ನೂ ಹೆಚ್ಚಿನ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಹಕಾರ ಅವಶ್ಯಕ ಎಂದು ಹೇಳಿದರು.
    ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಗರ ಮತ್ತು ಗ್ರಾಮೀಣ ಭಾಗದ ಯುವಜನರನ್ನು ಉದ್ಯೋಗಿಗಳನ್ನಾಗಿಸುವ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಶ್ಲಾಘಿಸಿದರು.
    ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರು, ಅನಕ್ಷರಸ್ಥರು, ಕುಶಲಕರ್ಮಿಗಳು, ರೈತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲು ಗ್ರಾಮಾಭಿವೃದ್ಧಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸರ್ಕಾರದ ಸೌಲಭ್ಯಗಳು ತಲುಪುವ ಜತೆಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಬಲ ನೀಡುವ ಕೆಲಸವನ್ನು ಯಶಸ್ವಿಯಾಗಿ ಪೂರೈಸುತ್ತಿದೆ ಎಂದರು.
    ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಎಸ್.ಅನಿಲ್‌ಕುಮಾರ್ ಮಾತನಾಡಿ, ರಾಜ್ಯದಲ್ಲಿ ಸುಮಾರು ಐದು ಲಕ್ಷ ಸ್ವಸಹಾಯ ಸಂಘಗಳಿವೆ. 45 ಲಕ್ಷ ಸದಸ್ಯರಿದ್ದಾರೆ. ಸ್ಥಳೀಯ ಜನತೆ ಹಾಗೂ ಯೋಜನಾಧಿಕಾರಿಗಳ ಸಹಕಾರದಿಂದ ರಾಜ್ಯದಲ್ಲಿ ಅತ್ಯುತ್ತಮವಾಗಿ ಸಂಘವು ಮುನ್ನಡೆಯುತ್ತಿದೆ ಎಂದು ಹೇಳಿದರು.
    ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಬಿ.ಗೀತಾ, ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್, ಯೋಜನಾಧಿಕಾರಿಗಳಾದ ರಮೇಶ್ ನಾಯ್ಕ, ಕೊರಗಪ್ಪ ಪೂಜಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts