More

    ನಿರಂತರ ಪ್ರಯತ್ನದಿಂದ ಉನ್ನತ ಸಾಧನೆ

    ಬೆಳಗಾವಿ: ಕೆಎಲ್‌ಇ ಸಂಸ್ಥೆಯು ಅಸಂಖ್ಯ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಅವಿರತ ಶ್ರಮದಿಂದ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯಮಟ್ಟದಲ್ಲಿ ಬೆಳೆದು ನಿಂತಿದೆ. ಸಾಧನೆ ಎನ್ನುವುದು ಒಂದೆರಡು ದಿನಗಳಲ್ಲಿ ಬರುವುದಿಲ್ಲ. ನಿರಂತರವಾದ ಪ್ರಯತ್ನ ಹಾಗೂ ಹೋರಾಟ ಬೇಕು ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.

    ನಗರದ ಕೆಎಲ್‌ಇ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪಡೆದುಕೊಂಡ ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕಿ ಸ್ವಪ್ನಾ ಅನಿಗೋಳ, ರಾಷ್ಟ್ರಮಟ್ಟದ ಸೈನಿಕ ಶಿಬಿರ (ಟಿಎಸ್‌ಸಿ)ದಲ್ಲಿ ಕರ್ನಾಟಕ ಗೋವಾ ಎನ್‌ಸಿಸಿ ಡೈರೆಕ್ಟೋರೆಟ್‌ದಿಂದ ಆಯ್ಕೆಯಾಗಿ ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ ಜಿ.ಎ.ಪ್ರೌಢಶಾಲೆಯ ವಿದ್ಯಾರ್ಥಿ ವಿಶಾಲ ಶಿರೋಳ್ಕರ ಹಾಗೂ ಮಧ್ಯಪ್ರದೇಶದ ಮಾವೋದಲ್ಲಿ ಜರುಗಿದ 32ನೇ ಜಿವಿ ಮೌಲ್ವಂಕರ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ದಲ್ಲಿ ಬೆಳ್ಳಿ ಪದಕ ಪಡೆದು ದಾಖಲೆ ನಿರ್ಮಿಸಿದ ಪ್ರೀತಿ ಸವಡಿ, ಗುರುನಾಥ ರಾಜೋಳಿ ಅವರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು. ವಿಜ್ಞಾನ ವಿಷಯದಲ್ಲಿ ಕ್ರಿಯಾಶೀಲ ಶಿಕ್ಷಕಿಯಾಗಿ ಸ್ವಪ್ನಾ ಅನಿಗೋಳ 20 ವರ್ಷಗಳಿಂದ ಬೋಧನೆಯಲ್ಲಿ ತೊಡಗಿಸಿಕೊಂಡು ಮಕ್ಕಳ ಹದಯ ಗೆದ್ದಿದ್ದಾರೆ.

    ಎನ್‌ಸಿಸಿ ಕೆಡೆಟ್‌ಗಳು ಉತ್ತಮ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ. ಮಾತ್ರವಲ್ಲ ಕೆಎಲ್‌ಇ ಸಂಸ್ಥೆಯ ಕೀರ್ತಿಯನ್ನು ಬಾನೆತ್ತರಕ್ಕೆ ವಿಸ್ತರಿಸಿದ್ದಾರೆ. ಈ ಎಲ್ಲ ಸಾಧಕರು ಸಮಾಜಕ್ಕೆ ಪ್ರೇರಕರಾಗಿ ನಿಂತಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ಇನ್ನಷ್ಟು ಸಾಧನೆ ಮಾಡಲೆಂದು ಶುಭಕೋರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts