More

    ವ್ಯಕ್ತಿಯನ್ನು ಅವರ ವ್ಯಕ್ತಿತ್ವದಿಂದ ಗುರುತಿಸುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಸಲಹೆ

    ರಾಯಚೂರು: ವ್ಯಕ್ತಿಯನ್ನು ಅವರ ವ್ಯಕ್ತಿತ್ವದಿಂದ ಗುರುತಿಸಬೇಕೆ ಹೊರತು ಲಿಂಗತ್ವದಿಂದ ಅಲ್ಲ. ತೃತೀಯ ಲಿಂಗಿಗಳಿಗೆ ಅವರ ಮನೆಯವರು ಮತ್ತು ಸಮಾಜ ಶತ್ರುಗಳಾಗಿದ್ದಾರೆ. ತೃತೀಯ ಲಿಂಗಿಗಳ ರಕ್ಷಣೆ, ಹಕ್ಕುಗಳನ್ನು ನೀಡುವುದೂ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹೇಳಿದರು.

    ಸ್ಥಳೀಯ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸಂಗಮ ಸಂಸ್ಥೆ ಮತ್ತು ಆಪ್ತಮಿತ್ರ ಸೇವಾ ಸಂಸ್ಥೆ ಶುಕ್ರವಾರ ಆಯೋಜಿಸಿದ್ದ ಲೈಂಗಿಕ ಅಲ್ಪ ಸಂಖ್ಯಾತರ ಸೌಹಾರ್ದ ಸಮುದಾಯದ 10ನೇ ವಾರ್ಷಿಕ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.ಮಂಗಳಮುಖಿಯರ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಜತೆಗೆ ಉತ್ತಮ ಶಿಕ್ಷಣ ಪಡೆಯುವುದು ಅವಶ್ಯವಾಗಿದೆ. ತೃತೀಯ ಲಿಂಗಿಗಳು ಸಮಾಜದಲ್ಲಿ ಗೌರವದಿಂದ ಬದುಕುವಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕು ಎಂದು ಹೇಳಿದರು.

    ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಮಾತನಾಡಿ, ಜಿಲ್ಲೆಯಲ್ಲಿ ಮಂಗಳಮುಖಿಯರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಮಸ್ಯೆಗಳಿದ್ದರೆ ಅವರು ಗಮನಕ್ಕೆ ತಂದರೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

    ನ್ಯಾಯಾಧೀಶ ಆರ್.ಎ.ಮಹಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ, ಆಪ್ತಮಿತ್ರ ಸಂಸ್ಥೆಯ ಪದಾಧಿಕಾರಿಗಳಾದ ಬಿ.ಉಷಾ ಗೌಳೂರು, ವಿದ್ಯಾ ಪಾಟೀಲ್, ಚಾಮರಾಜ, ಅಂಬಣ್ಣ ಅರೋಲಿಕರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts