ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬರಮಡಿಕೇರಿ ನಗರದ ಪಂಪಿನ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ನಗರದ ಮುತ್ತಪ್ಪ ದೇವಾಲಯ ಬಳಿ ನಿವಾಸಿ ಪ್ರದೀಪ್(50 )ಮೃತ ದುರ್ದೈವಿ. ಪ್ರದೀಪ್ ಇತ್ತೀಚೆಗೆ ನಡೆದ ಮಡಿಕೇರಿ ದಸರಾ ಜನೋತ್ಸವ ಸಂದರ್ಭ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಮಂಗಳವಾರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ.

ಘಟನಾ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *