More

    ವೈಯುಕ್ತಿಕ ಸ್ವಚ್ಛತೆಗೆ ಇರಲಿ ಅದ್ಯತೆ, ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ ಕಿವಿಮಾತು

    ಮಾನ್ವಿ: ಹದಿಹರೆಯದ ಹೆಣ್ಣು ಮಕ್ಕಳು ಆರೋಗ್ಯದತ್ತ ಹೆಚ್ಚು ಗಮನ ಹರಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ ಹೇಳಿದರು.

    ಜಾಗೃತಿ ಕಾರ್ಯಕ್ರಮ

    ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಋತುಚಕ್ರ ಮತ್ತು ಮುಟ್ಟಿನ ನೈರ್ಮಲ್ಯದ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಇದನ್ನೂ ಓದಿ:ಕಾಂಡೋಮ್​ ಬೇಕಾ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಮಹಿಳಾ ಅಧಿಕಾರಿಗೆ ಎದುರಾಯ್ತು ಸಂಕಷ್ಟ!

    ಮುಟ್ಟು ಸಹಜ ಪ್ರಕ್ರಿಯೆಯಾಗಿದ್ದು, ಮುಟ್ಟಿನ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಸ್ತ್ರೀರೋಗ ತಜ್ಞರಲ್ಲಿ ಸೂಕ್ತ ಸಲಹೆ ಪಡಯಬೇಕು. ಮುಟ್ಟಿನ ಸಮಯದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಬಳಸುವ ಮೂಲಕ ವೈಯುಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಸ್ಯಾನಿಟರಿ ನ್ಯಾಪ್ಕಿನ್ ಬಳಸಿದ ನಂತರ ಅವುಗಳನ್ನು ಸೂಕ್ತವಾಗಿ ವಿಲೇವಾರಿ ಮಾಡುವ ಮೂಲಕ ಪರಿಸರದ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.

    ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಉಪ್ಪಾರ ಕಾರ್ಯಕ್ರಮ ಉದ್ಘಾಟಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಹಾಲಿಂಗಪ್ಪ, ಸಿಡಿಪಿಒ ನಿರ್ಮಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts