More

    ವೈಯಕ್ತಿಕ ಕೆಲಸಗಳನ್ನು ಬದಿಗೊತ್ತಿ ಮತ ಹಾಕಿ

    ಹನುಮಸಾಗರ: ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಿ ಎಂದು ತಾಪಂ ಇಒ ನಿಂಗಪ್ಪ ಎಸ್. ಮಸಳಿ ಹೇಳಿದರು.

    ಸಮೀಪದ ರಾಂಪೂರದ ಶ್ರೀ ಮಾರುತೇಶ್ವರ ದೇವಸ್ಥಾನದ ಬಳಿ ತಾಲೂಕು ಸ್ವೀಪ್ ಸಮಿತಿ ಹಾಗೂ ನಿಲೋಗಲ್ಲ ಗ್ರಾಪಂನಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಇದನ್ನು ಓದಿ: ಮತದಾನ ಬಿಹಿಷ್ಕಾರ ನಿರ್ಧಾರ ವಾಪಸ್

    ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಿ ಮತ ಚಲಾಯಿಸಬೇಡಿ. ಹಣ, ಸಾರಾಯಿಗೆ ನಿಮ್ಮ ಮತ ಮಾರಿಕೊಳ್ಳಬೇಡಿ. ಅಭಿವೃದ್ಧಿ ಕಾರ್ಯಗಳನ್ನು ಮಾಡುವ, ಜನಪರ ಯೋಜನೆಗಳನ್ನು ಜಾರಿಗೆ ತರುವವರಿಗೆ ನಿಮ್ಮ ಮತ ನೀಡಿ. ಸಂವಿಧಾನದಲ್ಲಿ 18ವರ್ಷ ಮೇಲ್ಪಟ್ಟವರಿಗೆ ಮತದಾನ ಹಕ್ಕನ್ನು ನೀಡಲಾಗಿದೆ. ನಿಮ್ಮ ನಿಮ್ಮ ವೈಯಕ್ತಿಕ ಕೆಲಸಗಳನ್ನು ಬದಿಗೊತ್ತಿ ತಪ್ಪದೇ ಎಲ್ಲರೂ ಮತದಾನ ಮಾಡಬೇಕು.

    ಗುಳೆ ಹೋಗುವುದನ್ನು ಬಿಟ್ಟು ಸ್ವಗ್ರಾಮದಲ್ಲೇ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿ, ಮೇ 7 ರಂದು ತಪ್ಪದೇ ಮತದಾನ ಮಾಡಬೇಕು ಎಂದರು. ನಂತರ ಸಾರ್ವಜನಿಕರಿಗೆ ಮತದಾನ ಪ್ರತಿಜ್ಞಾವಿಧಿ ಬೋಧಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts