ನಾಯಕರ ವ್ಯಕ್ತಿತ್ವ ಜಗತ್ತಿಗೆ ಮಾದರಿ

gujjadi
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು
Published on

ಗಂಗೊಳ್ಳಿ: ಗಾಂಧೀಜಿ ಮತ್ತು ಶಾಸ್ತ್ರಿ ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅವರಿಬ್ಬರ ವ್ಯಕ್ತಿತ್ವ ಜಗತ್ತಿಗೆ ಮಾದರಿ ಜತೆಗೆ ಯುವ ಸಮುದಾಯಕ್ಕೆ ಸ್ಫೂರ್ತಿ ಎಂದು ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು.

ಗುಜ್ಜಾಡಿಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳಲ್ಲಿ ಬುಧವಾರ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗರ್, ಸ್ಕೌಟ್ ಹಾಗೂ ಗೈಡ್ಸ್ ಶಿಕ್ಷಕಿ ಲಾವಣ್ಯ ಉಪಸ್ಥಿತರಿದ್ದರು.

ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ಸುಗುಣಾ ಸ್ವಾಗತಿಸಿ, ಉಪನ್ಯಾಸಕಿ ಅಕ್ಷಯ ಅತಿಥಿಗಳನ್ನು ಪರಿಚಯಿಸಿದರು. ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ವಂದಿಸಿದರು. ಉಪನ್ಯಾಸಕಿ ಪ್ರಪುಲ್ಲ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net