More

    ವಿಕಲಚೇತನರಿಗೆ ಅವಕಾಶ ಕಲ್ಪಿಸಿ

    ಯಲಬುರ್ಗಾ: ವಿಕಲಚೇತನರು ಗೌರವದಿಂದ ಬದುಕಲು ಸಮಾಜ ಹಾಗೂ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಹೇಳಿದರು.

    ಇದನ್ನೂ ಓದಿ: ರೆಡ್​ ಕ್ರಾಸ್​ ನಿಂದ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ

    ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಪಂ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನರ ದಿನಾಚರಣೆಯಲ್ಲಿ ಬುಧವಾರ ಮಾತನಾಡಿದರು.

    ವಿಕಲಚೇತನರನ್ನು ಕೀಳಾಗಿ ಕಾಣದೆ, ಗೌರವದಿಂದ ಕಂಡಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯ. ಸಬಲೀಕರಣಕ್ಕಾಗಿ ಸರ್ಕಾರಗಳು ಜಾರಿಗೊಳಿಸಿದ ಯೋಜನೆಗಳು ಸದ್ಬಳಕೆಯಾಗಬೇಕು. ಅಂಗವಿಕಲರನ್ನು ಶಿಕ್ಷಣವಂತರನ್ನಾಗಿ ಮಾಡಿ, ಸ್ವ-ಉದ್ಯೋಗ ಕೈಗೊಂಡಗಲೇ ಸ್ವಾವಲಂಬಿ ಜೀವನ ನಡೆಸಲು ಸಹಕಾರಿ ಎಂದರು.

    ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ್, ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಬೇಲೇರಿ, ಬಿಇಒ ಕೆ.ಟಿ.ನಿಂಗಪ್ಪ, ವಿಕಲಚೇತನರ ಸಂಘದ ಬಸನಗೌಡ ಬನ್ನಪ್ಪಗೌಡ್ರ, ಸಿಪಿಡಿಒ ಬೆಟ್ಟದಪ್ಪ ಮಾಳೆಕೊಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts