ಬೆಂಗಳೂರು: ಮುಡಾ (Muda) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನವೆಂಬರ್ 06ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದು, ಅದರಂತೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ತಿಳಿಸಿದ್ದಾರೆ. ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ (CBI) ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀರು ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದೆ. 2024 ನವೆಂಬರ್ 25ವರೆಗೆ ಲೋಕಾಯುಕ್ತ ನಡೆಸುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಪ್ರಕರಣದ ಮೊದಲ ಆರೋಪಿ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದಂತೆ ಉಳಿದೆಲ್ಲಾ ಆರೋಪಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.
ವಿಚಾರಣೆ ವೇಳೆ ಸ್ನೇಹಮಯಿ ಕೃಷ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಜಿ.ರಾಘವನ್, ಈ ಪ್ರಕರಣದ ಫಲಿತಾಂಶ ಅಂತಿಮವಾಗಿ ಏನೇ ಹೊರಹೊಮ್ಮಿದರೂ ಸರಿಯೇ ಆದರೆ, ತನಿಖಾ ಪ್ರಕ್ರಿಯೆ ಸಾರ್ವಜನಿಕರಿಗೆ ವಿಶ್ವಾಸ ಹುಟ್ಟುಹಾಕುವಂತಿರಬೇಕು ಅದನ್ನು ಮಾಡಲಾಗುತ್ತಿಲ್ಲ. ಈ ಪ್ರಕರಣದ ತನಿಖೆಯನ್ನು ಸಿಬಿಐ (CBI) ತೆಕ್ಕೆಗೆ ವರ್ಗಾಯಿಸಲು ಆದೇಶಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.
ಅರ್ಜಿ ಮಾನ್ಯ ಮಾಡಿದ ನ್ಯಾಯಾಲಯವು ಪ್ರತಿವಾದಿಗಳಾದ ರಾಜ್ಯ ಗೃಹ ಸಚಿವಾಲಯ, ಗೃಹ ಇಲಾಖೆ, ಸಿಬಿಐ, ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ಸೇರಿದಂತೆ ಒಟ್ಟು 12 ಮಂದಿಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದೆ.
ಪಾಕಿಸ್ತಾನದಲ್ಲಿ ತೀವ್ರ Air Pollution ಆಗಲು ಭಾರತವೇ ಕಾರಣ: ಸಚಿವರ ಹೇಳಿಕೆ Viral
Guruprasad ಆತ್ಮಹತ್ಯೆಯ ಸುತ್ತ ಅನುಮಾನದ ಹುತ್ತ; ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂತು ಸ್ಫೋಟಕ ಅಂಶ