More

    ಪರಿಶಿಷ್ಟ ಪಂಗಡದ ಕುಟುಂಬಕ್ಕೆ ಹಕ್ಕುಪತ್ರ ವಿತರಿಸಲು ಮನವಿ

    ಚಿಕ್ಕಮಗಳೂರು: ಹಲವು ವರ್ಷಗಳಿಂದ ವಾಸಿಸುತ್ತಿರುವ ಮೂಲನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಬೇಕು ಎಂದು ಒತ್ತಾಯಿಸಿ ಡಿಎಸ್‌ಎಸ್ ಕಾರ್ಯಕರ್ತರು ಡಿಸಿ ಕಚೇರಿ ಶಿರಸ್ತೇದಾರ್ ಹೇಮಂತ್ ಕುಮಾರ್ ಅವರ ಮೂಲಕ ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಿದರು.

    ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲಿ, ಕಳಸ ತಾಲೂಕಿನ ತೋಟದೂರು ಗ್ರಾಪಂ ವ್ಯಾಪ್ತಿಯ ತನುಡಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ೨೦ಕ್ಕೂ ಹೆಚ್ಚು ಕುಟುಂಬಗಳಿಗೆ ವಸತಿಗೆ ಹಕ್ಕು ಪತ್ರ ವಿತರಿಸದೇ ಸತಾಯಿಸಲಾಗುತ್ತಿದೆ ಎಂದು ದೂರಿದರು.
    ಪ್ರಸ್ತುತ ತನುಡಿ ಗ್ರಾಮದ ಸರ್ವೆ ನಂ.೩೬ ರಲ್ಲಿ ೧೫೦ಕ್ಕೂ ಕುಟುಂಬಗಳಿವೆ. ಈ ಪೈಕಿ ಅರಣ್ಯ ಇಲಾಖೆ ೧೩೦ ಕುಟುಂಬಕ್ಕೆ ಮಾತ್ರ ಹಕ್ಕುಪತ್ರ ವಿತರಿಸಿದ್ದು, ಇನ್ನುಳಿದ ೨೦ ಪರಿಶಿಷ್ಟ ಪಂಗಡದ ಕುಟುಂಬಗಳು ೯೪ಸಿ ಅಡಿ ಅರ್ಜಿ ಸಲ್ಲಿಸಿದ್ದರೂ ಸಹ ಇದುವರೆಗೂ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿದರು.
    ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಲೇ ಪರಿಶಿಷ್ಟ ಪಂಗಡದವರ ಅರ್ಜಿಗಳನ್ನು ಪರಿಶೀಲನೆ ಮಾಡಿ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಒತ್ತಾಯಿಸಿದರು.
    ಮನವಿ ಸಲ್ಲಿಸುವ ಸಂದರ್ಭದಲ್ಲಿ ಡಿಎಸ್‌ಎಸ್ ಕಳಸ ತಾಲೂಕು ಸಂಚಾಲಕ ವಸಂತ್, ತನುಡಿ ಗ್ರಾಮಸ್ಥರಾದ ಪ್ರಭಾಕರ್, ಸೀನಾ, ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts