ಚುನಾವಣಾ ಬಹಿಷ್ಕಾರ ಹಿಂಪಡೆಯಲು ಮನವಿ

manavi
ಆಲೂರು ಪಂಚಾಯಿತಿಗೆ ಕುಂದಾಪುರ ಉಪವಿಭಾಗಾಧಿಕಾರಿ ಕೆ.ಮಹೇಶ್ಚಂದ್ರ ಸಹಿತ ತಾಲೂಕು ಅಧಿಕಾರಿಗಳು ಭೇಟಿ ನೀಡಿದರು. ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮ್ಮಿ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಡಾ.ರವಿ, ತಾಪಂ ಮ್ಯಾನೇಜರ್ ರಾಮಚಂದ್ರ ಮಯ್ಯ ಮತ್ತಿತರರು ಉಪಸ್ಥಿತರಿದ್ದರು.
Published on

ಕುಂದಾಪುರ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ ಆಲೂರು ಗ್ರಾಪಂ ಸದಸ್ಯರು ವಿಧಾನ ಪರಿಷತ್ ಉಪಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸದಸ್ಯರ ಮನವೊಲಿಸುವ ಸಂಬಂಧ ಆಲೂರು ಪಂಚಾಯಿತಿಗೆ ಸೋಮವಾರ ಕುಂದಾಪುರ ಉಪವಿಭಾಗಾಧಿಕಾರಿ ಕೆ.ಮಹೇಶ್ಚಂದ್ರ ಸಹಿತ ತಾಲೂಕು ಅಧಿಕಾರಿಗಳು ಭೇಟಿ ನೀಡಿದರು.

ಗ್ರಾಪಂ ಸದಸ್ಯರ ಅಹವಾಲು ಸ್ವೀಕರಿಸಿದ ಎಸಿ, ಕಸ್ತೂರಿ ರಂಗನ್ ವರದಿಯಿಂದ ಜನರಿಗೆ ಯಾವುದೇ ತೊಂದರೆ ಇಲ್ಲ. ನಿಮ್ಮೆಲ್ಲ ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇವೆ. ಸದಸ್ಯರು ಚುನಾವಣೆ ಬಹಿಷ್ಕಾರ ಹಿಂಪಡೆಯಬೇಕು ಎಂದು ಮನವಿ ಮಾಡಿದರು.

ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮ್ಮಿ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಡಾ.ರವಿ, ತಾಪಂ ಮ್ಯಾನೇಜರ್ ರಾಮಚಂದ್ರ ಮಯ್ಯ, ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಗ್ರಾಪಂ ಅಧ್ಯಕ್ಷ ರಾಜೇಶ್ ದೇವಾಡಿಗ, ಸದಸ್ಯರು, ಪಿಡಿಒ ರೂಪಾ ಗೋಪಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net