More

    ಸದನದಲ್ಲಿ ಧ್ವನಿ ಎತ್ತುವಂತೆ ಒತ್ತಾಯ

    ಕುಷ್ಟಗಿ: ಕನಿಷ್ಠ ವೇತನ, ಸೇವಾ ಭದ್ರತೆ ಮತ್ತಿತರ ಬೇಡಿಕೆ ಈಡೇರಿಸುವ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಒತ್ತಾಯಿಸಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಾಸಕ ದೊಡ್ಡನಗೌಡ ಪಾಟೀಲ್‌ಗೆ ಮನವಿ ಸಲ್ಲಿಸಿದರು.

    ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 43ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳ ಕಲಿಕೆಯ ಗುಣಮಟ್ಟ ಹೆಚ್ಚಿಸಲು ನಿತ್ಯ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಕನಿಷ್ಠ ವೇತನ, ಸೇವಾಭದ್ರತೆ, ರಜೆ ಸೌಲಭ್ಯಗಳು ಇಲ್ಲದೆ ಬದುಕು ಅತಂತ್ರವಾಗಿದೆ.

    ಆರ್ಥಿಕ ಸಂಕಷ್ಟದ ನೋವಿನಿಂದ ಕೆಲ ಅತಿಥಿ ಶಿಕ್ಷಕರು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಅತಿಥಿ ಶಿಕ್ಷಕರ ಕುಟುಂಬಗಳ ಹಿತದೃಷ್ಟಿಯಿಂದ ಸರ್ಕಾರ ನ್ಯಾಯ ಒದಗಿಸಿಕೊಡಬೇಕಿದೆ. ಬೆಳಗಾವಿ ಅಧಿವೇಶನದಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳ ಚರ್ಚೆ ನಡೆಯಲು ಶಾಸಕರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

    ಸಂಘದ ಅಧ್ಯಕ್ಷ ಶ್ರೀಕಾಂತ ಕಿರಗಿ, ಸದಸ್ಯರಾದ ಮುತ್ತಪ್ಪ ವಾಲಿಕಾರ, ಶಿವಪ್ಪ ಗರ್ಜಿನಾಳ, ಪ್ರವೀಣ್, ಶರಣಪ್ಪ, ದೇವರಾಜ್, ನೀಲಪ್ಪ, ರೇಣುಕಾ ಬಂಡಿ, ರುಬಿನಾ, ಯಮನೂರಪ್ಪ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts