ಪಾಕಿಸ್ತಾನ ಅಪ್ರಾಪ್ತ ಮಕ್ಕಳು ಅರ್ಜಿ ವಜಾ: ಕೇಂದ್ರ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲ್ಲ ಎಂದ ಹೈಕೋರ್ಟ್

highcourt
Published on

ಬೆಂಗಳೂರು:  ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಎಲ್ಲ ಪಾಕಿಸ್ತಾನದ ಪ್ರಜೆಗಳು ದೇಶ ತೊರೆಯಬೇಕೆಂಬ ಕೇಂದ್ರ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.

ಅಲ್ಲದೆ, ತಮ್ಮ ವಿರುದ್ಧ ಬವಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿದ ಪಾಕಿಸ್ತಾನದ ಮೂವರು ಅಪ್ರಾಪ್ತ ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಈ ಕುರಿತಾಗಿ ಪಾಕ್‌ನ ಬಲೂಚಿಸ್ತಾನದ 8 ವರ್ಷದ ಕುಮಾರಿ ಬಿಬಿ ಯಾಮಿನಾ, 4 ವರ್ಷದ ಮಾಸ್ಟರ್ ಮುಹಮ್ಮದ್ ಮುದಾಸ್ಸಿರ್ ಮತ್ತು 3 ವರ್ಷದ ಮಾಸ್ಟರ್ ಮೊಹಮ್ಮದ್ ಯೂಸಫ್ ಎಂಬವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿ ಎಂ. ಜಿ ಉಮಾ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ , ಕಾಶ್ಮೀರದ ಪಹಲ್ಗಾಮ್ನಲ್ಲಿ ಮಾರಕ ದಾಳಿಯಾಗಿದೆ. ದೇಶದ ಪ್ರಜೆಗಳ ರಕ್ಷಣೆಯಿಂದಾಗಿ ಪಾಕಿಸ್ತಾನಿ ನಿವಾಸಿಗಳು ದೇಶ ತೊರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

ಅರ್ಜಿದಾರ ಮಕ್ಕಳ ತಾಯಿ ಭಾರತದವರಾಗಿದ್ದು ಷರಿಯತ್ ಕಾನೂನಿನ ಪ್ರಕಾರ ಪಾಕಿಸ್ತಾನದ ಪ್ರಜೆಯನ್ನು ವಿವಾಹವಾಗಿದ್ದರು. ಆದರೆ, ಪಾಕಿಸ್ತಾನದ ಪೌರತ್ವ ಪಡೆಯದೆ ಭಾರತದ ಪ್ರಜೆಯಾಗಿ ಮುಂದುವರೆದಿದ್ದಾರೆ. ಆದರೆ, ಅರ್ಜಿದಾರರು ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿರುವ ಪ್ರಜೆಗಳಾಗಿದ್ದು, ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ತಾಯಿಯೊಂದಿಗೆ 2025ರ ಜನವರಿ 4ರಂದು ವೀಸಾ ಪಡೆದು ಭಾರತಕ್ಕೆ ಬಂದಿದ್ದರು. ಬಳಿಕ 2025ರ ಜೂನ್ 18ರವರೆಗೂ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಜೂನ್ 18ರಂದು ವೀಸಾ ಅವಧಿ ಮುಕ್ತಾಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net