More

    ಶಾಸಕ ಎ.ಮಂಜುಗೆ ಮನವಿ ಸಲ್ಲಿಕೆ ನಾಳೆ

    ಅರಕಲಗೂಡು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜ.20ರಂದು ಬೆಳಗ್ಗೆ 10 ಗಂಟೆಗೆ ಶಿಕ್ಷಕರ ಭವನದಲ್ಲಿ ಶಾಸಕ ಎ.ಮಂಜು ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಎನ್.ಮಹೇಶ್ ತಿಳಿಸಿದರು.
    ಸರ್ಕಾರಿ ನೌಕರರಿಗೆ ಸಿಗಬೇಕಿರುವ ಸವಲತ್ತುಗಳು ಮರೀಚಿಕೆಯಾಗಿದ್ದು, ನೌಕರರ ಬೇಡಿಕೆಗಳ ಕುರಿತು ಶಾಸಕರಿಗೆ ಮನವಿ ಸಲ್ಲಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಫೆಬ್ರವರಿಯಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವಿದ್ದು, ಅದರ ಪೂರ್ವಭಾವಿಯಾಗಿ ತಾಲೂಕು ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಸಂಘದ ಅಧ್ಯಕ್ಷ ಸಿ. ಎಸ್.ಷಡಾಕ್ಷರಿ ಅವರ ನಿರ್ದೇಶನದಂತೆ ಶಾಸಕರಿಗೆ ಮನವಿ ಸಲ್ಲಿಸಲಾಗುವುದು. ಅಂದು ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಮ್ಮ ದೇವಸ್ಥಾನದಿಂದ ಮೆರವಣಿಗೆ ಹೊರಟು ಅನಕೃ ವೃತ್ತದ ಮೂಲಕ ಶಿಕ್ಷಕರ ಭವನಕ್ಕೆ ತೆರಳಿ ಶಾಸಕರಿಗೆ ಮನವಿ ಸಲ್ಲಿಸಲಾಗುವುದು ಎಂದರು.
    ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರೆಗೌಡ, ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ ಕುಮಾರ್, ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಯೋಗರಾಜ್, ಗೌರವಾಧ್ಯಕ್ಷ ತಾರಾನಾಥ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts