More

    ಕೇಂದ್ರದ ಬೆನ್ನಿಗೆ ರಾಜ್ಯದಿಂದಲೂ ಗುಡ್​ನ್ಯೂಸ್​; ಪೆಟ್ರೋಲ್​-ಡೀಸೆಲ್ ಬೆಲೆ ಇಳಿಕೆ

    ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಇಳಿಸಿದ ಬೆನ್ನಿಗೇ ರಾಜ್ಯ ಸರ್ಕಾರವೂ ಬೆಲೆ ಇಳಿಕೆ ನಿರ್ಧಾರ ಕೈಗೊಂಡಿದ್ದು, ಪೆಟ್ರೋಲ್​-ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ ಆಗಲಿದೆ.

    ಕೇಂದ್ರ ಸರ್ಕಾರ ಪೆಟ್ರೋಲ್​ ಮೇಲೆ 5 ರೂ. ಹಾಗೂ ಡೀಸೆಲ್​ ಮೇಲೆ 10 ರೂ. ಅಬಕಾರಿ ಸುಂಕವನ್ನು ಇಳಿಸುವ ಕುರಿತ ನಿರ್ಧಾರವನ್ನು ಇಂದು ಪ್ರಕಟಿಸಿತ್ತು. ಮಾತ್ರವಲ್ಲದೆ ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿರುವುದಾಗಿ ಹೇಳಿದೆ.

    ಇದಾದ ಕೆಲವೇ ನಿಮಿಷಗಳಲ್ಲಿ ಕರ್ನಾಟಕ ಸರ್ಕಾರ ಕೂಡ ಪೆಟ್ರೊಲ್​-ಡೀಸೆಲ್​ ಬೆಲೆ ಇಳಿಸಲಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್​ ಮೇಲೆ ತಲಾ 7 ರೂ. ಇಳಿಸಲಿರುವುದಾಗಿ ಅವರು ಹೇಳಿದ್ದಾರೆ.

    ಹೊಸ ದರ ನಾಳೆ ಸಂಜೆಯಿಂದ ಜಾರಿಗೆ ಬರಲಿದ್ದು, ರಾಜ್ಯದಲ್ಲಿ ಪೆಟ್ರೋಲ್​ ಬೆಲೆ ಲೀಟರ್​ಗೆ ಅಂದಾಜು 95.50 ರೂ. ಹಾಗೂ ಡೀಸೆಲ್​ ಬೆಲೆ 81.50 ರೂ. ಆಗಲಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಅಂದಾಜು 2,100 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದೂ ಅವರು ತಿಳಿಸಿದ್ದಾರೆ.

    ಹಬ್ಬದ ಖುಷಿ ಹೆಚ್ಚಿಸುವಂಥ ನಿರ್ಧಾರ ತಳೆದ ಕೇಂದ್ರ ಸರ್ಕಾರ; ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕ ಇಳಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts