ನವದೆಹಲಿ: ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಕೇಂದ್ರ ಸರ್ಕಾರ ವಾಹನ ಸವಾರರಿಗೆ ಶುಭ ಸುದ್ದಿಯೊಂದನ್ನು ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ಮಾರ್ಚ್ 15ರ ಬೆಳಗ್ಗೆ 06 ಗಂಟೆಗೆ ಜಾರಿಗೆ ಬರುತ್ತದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಲಾಗಿತ್ತು.
ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸುವ ಮೂಲಕ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ವಾಹನ ಸವಾರರಿಗೆ ಬಂಪರ್ ಉಡುಗೊರೆಯನ್ನು ನೀಡಿದೆ.